ಬೆಂಗಳೂರು: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಅಧೀನದಲ್ಲಿರುವ ಡಿಪ್ಲೋಮ ಕೃಷಿ ಕಾಲೇಜು ಬ್ರಹ್ಮಾವರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೋಮ ಕೃಷಿ ಕೋರ್ಸ್ಗೆ ಭರ್ತಿಯಾಗದೆ ಖಾಲಿ ಉಳಿದಿರುವ ಸೀಟುಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೋಮ ಕೃಷಿವನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.
ಡಿಪ್ಲೋಮ ಕೃಷಿ ಕೋರ್ಸ್ಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾμÉಯಾಗಿ ಅಭ್ಯಸಿಸಿ ಕನಿಷ್ಟ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಟ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೋಮ ಕೃಷಿ ಪ್ರವೇಶಾತಿಗೆ ಮೀಸಲಿಡಲಾಗಿದೆ. ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ. ಶಿವಮೊಗ್ಗದ ವೆಬ್ಸೈಟ್ : www.uahs.edu.in ನಲ್ಲಿ ಡೌನ್ ಲೋಡ್ ಮಾಡಬಹುದು. ಭರ್ತಿಮಾಡಿದ ಅರ್ಜಿಗಳನ್ನು, ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ ಮುಕ್ತ ಕೌನ್ಸಿಲಿಂಗ್ ದಿನ ತರುವುದು.
ಸಾಮಾನ್ಯ ವರ್ಗದವರಿಗೆ ಅರ್ಜಿ ಶುಲ್ಕ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1 ರವರಿಗೆ ರೂ. 250/- ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್ಗಳ ಡಿಡಿಯನ್ನು Comptroller, KSNUAHS, Shivamogga – 577 412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಲೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 25 ರಂದು ಬೆಳಿಗ್ಗೆ 10.30 ಗಂಟೆಗೆ ಖುದ್ದಾಗಿ ಎಂಪಿ ಹಾಲ್, ಕೃಷಿ ವಿಶ್ವವಿದ್ಯಾಲಯ, ನವಿಲೆ, ಶಿವಮೊಗ್ಗ ಈ ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು. ನಿಗಧಿತ ಸಮಯದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರವೇಶ ಮತ್ತು ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಉಳಿದಿರುವ ಸೀಟುಗಳನ್ನು ಮುಕ್ತ ಕೌನ್ಸಿಲಿಂಗ್ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳಪಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳು ರೂ. 6,190/- ಪ್ರವೇಶ ಶುಲ್ಕವನ್ನು ನಗದಾಗಿ ಸ್ಥಳದಲ್ಲಿಯೇ ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಪೆÇೀಷಕರ ಆದಾಯ ರೂ. 2.5 ಲಕ್ಷದೊಳಗಿದ್ದರೆ ಅಂತಹ ಅಭ್ಯರ್ಥಿಗಳು ರೂ. 2,000/- ಪ್ರದೇಶ ಶುಲ್ಕವನ್ನು ನಗದಾಗಿ ಸ್ಥಳದಲ್ಲಿಯೇ ಕಡ್ಡಾಯವಾಗಿ ಪಾವತಿಸಬೇಕಾಗಿರುತ್ತದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Counselling for remaining seats of diploma agriculture course to be held on October 25