SSLC-PUC ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ಪರೀಕ್ಷೆ’ ಬಗ್ಗೆ ಗೊಂದಲ, ಸಮಸ್ಯೆಗಳಿದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ

Attention SSLC-PUC students If you have any confusion or problems regarding the `exam', call this number

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಇದೇ ಹೊತ್ತಿನಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲ ನಿವಾರಣೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಲು ಶಿಕ್ಷಣ ಇಲಾಖೆಯಿಂದ 080 23310076, 080 23310075 ಸಹಾಯವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಕರೆ ಮಾಡಿ, ಪರೀಕ್ಷೆ ಬಗೆಗಿನ ಗೊಂದಲ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂಬುದಾಗಿ ತಿಳಿಸಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಏ.7ಕ್ಕೆ, SSLC ಪರೀಕ್ಷೆ-1ರದ್ದು ಏ.24ಕ್ಕೆ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 28-02-2026ರಿಂದ ಆರಂಭಗೊಂಡು, 17-03-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರದ್ದು ದಿನಾಂಕ 18-03-2026ರಿಂದ ಆರಂಭಗೊಂಡು, 02-04-2026ಕ್ಕೆ ಮುಕ್ತಾಯಗೊಳ್ಳಲಿದೆ. ಈ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ನಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Exams
Exams

ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ-1 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-1 2,871 ಕೇಂದ್ರಗಳಲ್ಲಿ ನಡೆಯಲಿದೆ. ಇಂತಹ ಪರೀಕ್ಷೆಯ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸುವ ಸಂಭಾವ್ಯ ದಿನಾಂಕವು 07-04-2026 ಆಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ದಿನಾಂಕ 24-04-2026ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 25-04-2026ರಿಂದ 09-05-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2 ದಿನಾಂಕ 18-05-2026ರಿಂದ 25-05-2026ರವರೆಗೆ ನಡೆಯಲಿದೆ. ಇದರ ಸಂಭಾವ್ಯ ಫಲಿತಾಂಶವನ್ನು ದ್ವಿತೀಯ ಪಿಯುಸಿ ಪರೀಕ್ಷೆ-2ರದ್ದು ದಿನಾಂಕ 22-05-2026, ಎಸ್ ಎಸ್ ಎಲ್ ಸಿ ಪರೀಕ್ಷೆ-2ರದ್ದು ದಿನಾಂಕ 01-06-2026ರಂದು ಪ್ರಕಟವಾಗುವ ಸಾಧ್ಯತೆ ಇದೆ ಅಂತ ಹೇಳಿದ್ದಾರೆ.

Attention SSLC-PUC students: If you have any confusion or problems regarding the `exam’, call this number

RECENT NEWS