ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ವಿವಿಧ ಇಲಾಖೆಗಳ ಗ್ರೂಪ್-ಬಿ ಹುದ್ದೆಗಳಿಗೆ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಲು ಉದ್ದೇಶಿಸಲಾಗಿದ್ದ ದಾಖಲೆಗಳ ಪರಿಶೀಲನೆಯನ್ನು 2025 ನೇ ಡಿಸೆಂಬರ್ 17 ರಿಂದ 23 ರವರೆಗೆ ಬೆಂಗಳೂರಿನ ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗ ಸೌಧ ಕೇಂದ್ರ ಕಛೇರಿಯಲ್ಲಿ ನಡೆಸಲಾಗುವುದು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್ ವಿಭಾಗ-1) 92 ಹುದ್ದೆಗಳಿಗೆ 2025 ನೇ ಡಿಸೆಂಬರ್ 17 ಮತ್ತು 18 ರಂದು ಬೆಳಿಗ್ಗೆ 10.00 ಗಂಟೆಗೆ ಹಾಗೂ ಮಧ್ಯಾಹ್ನ 2.30 ಗಂಟೆಗೆ, ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಭೂ ದಾಖಲೆಗಳ ಸಹಾಯಕ ನಿರ್ದೇಶಕರ 24 ಹುದ್ದೆಗಳಿಗೆ 2025 ನೇ ಡಿಸೆಂಬರ್ 19 ರಂದು ಬೆಳಿಗ್ಗೆ 10.00 ಗಂಟೆಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 21 ಹುದ್ದೆಗಳಿಗೆ 2025 ನೇ ಡಿಸೆಂಬರ್ 19 ರಂದು ಮಧ್ಯಾಹ್ನ 2.30 ಗಂಟೆಗೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕರ 20 ಹುದ್ದೆಗಳಿಗೆ 2025 ನೇ ಡಿಸೆಂಬರ್ 20 ರಂದು ಬೆಳಿಗ್ಗೆ 10.00 ಗಂಟೆಗೆ, ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕೆ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರ 7 ಹುದ್ದೆಗಳು ಮತ್ತು 03 ಹುದ್ದೆಗಳಿಗೆ, ಹಾಗೂ ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂವಿಜ್ಞಾನಿ 10 ಹುದ್ದೆಗಳಿಗೆ 2025 ನೇ ಡಿಸೆಂಬರ್ 20 ರಂದು ಮಧ್ಯಾಹ್ನ 2.30 ಗಂಟೆಗೆ, ಜಲಸಂಪನ್ಮೂಲ ಇಲಾಖೆಯ ಸಹಾಯಕ ಇಂಜಿನಿಯರ್ (ಸಿವಿಲ್ ವಿಭಾಗ-1) 90 ಹುದ್ದೆಗಳಿಗೆ 2025 ನೇ ಡಿಸೆಂಬರ್ 22 ಮತ್ತು 23 ರಂದು ಬೆಳಿಗ್ಗೆ 10.00 ಗಂಟೆ ಹಾಗೂ ಮಧ್ಯಾಹ್ನ 2.30 ಗಂಟೆಗೆ ಮತ್ತು ಜಲಸಂಪನ್ಮೂಲ ಇಲಾಖೆಯ ಸಹಾಯಕ ಇಂಜಿನಿಯರ್ (ಸಿವಿಲ್ –ವಿಭಾಗ -1) 10 ಹುದ್ದೆಗಳಿಗೆ 2025 ನೇ ಡಿಸೆಂಬರ್ 23 ರಂದು ಮಧ್ಯಾಹ್ನ 2.30 ಗಂಟೆಗೆ ನಡೆಸಲಾಗುವುದು.

ಅರ್ಹತಾ ಪಟ್ಟಿಯನ್ನು ಆಯೋಗದ ವೆಬ್ ಸೈಟ್ https://kpsc.kar.nic.in ನಲ್ಲಿ ಪ್ರಕಟಿಸಲಾಗಿದೆ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಸೂಚನಾ ಪತ್ರಗಳನ್ನು ಕಳುಹಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‍ಸೈಟ್ ನಲ್ಲಿ ಪರಿಶೀಲಿಸಿಕೊಳ್ಳುವಂತೆ ಕರ್ನಾಟಕ ಲೋಕಸೇವಾ ಆಯೋದ ಕಾರ್ಯದರ್ಶಿ ಡಾ.ವಿಶಾಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KPSC Date for verification of original documents for Group-B posts is as follows











Follow Me