ಧಾರವಾಡ : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಧಾರವಾಡದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ರಾಜಶೇಖರ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಲ ಪರಿಶೀಲನೆ ನಡೆಸಿದ್ದಾರೆ. ರಾಜಶೇಖರ್ ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿದ್ದು, ಈ ಹಿಂದೆ ಧಾರವಾಡದಲ್ಲೂ ಕಾರ್ಯ ನಿರ್ವಹಿಸಿದ್ದರು. ರಾಜಶೇಖರ್ ಗೆ ಸೇರಿದ 3 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Shock for corrupt officials in the morning: Lokayukta attacks in many parts of the state













Follow Me