ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು

vsk-university-ballari-textbook-launch-prof-m-muniraju

ಬೆಂಗಳೂರು : ಪಠ್ಯಪುಸ್ತಕಗಳು ವೈವಿಧ್ಯಮಯ ಜೀವನದ ಅನುಭವಗಳ ಜೊತೆಗೆ ವಿವಿಧ ಜ್ಞಾನಶಿಸ್ತುಗಳ ಕೈಪಿಡಿಗಳಾಗಿದ್ದು, ಶೈಕ್ಷಣಿಕ ವ್ಯವಸ್ಥೆಯ ಉದ್ದೇಶಗಳನ್ನು ಸಾಧಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಅಭಿಪ್ರಾಯಪಟ್ಟರು.

ನಗರದ ಬಳ್ಳಾರಿ ಬಿಜಿನೆಸ್ ಕಾಲೇಜು ಸಭಾಂಗಣದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ನಾತಕ ಪದವಿಯ ನಾಲ್ಕನೇ ಸೆಮಿಸ್ಟರ್‌ನ ಕಲಾ ಸೌರಭs-3, ವಾಣಿಜ್ಯ ಸೌರಭs-3, ವಿಜ್ಞಾನ ಸೌರಭ-3 ಕನ್ನಡ ಭಾಷಾ ಪಠ್ಯಪುಸ್ತಕಗಳ ಲೋಕಾರ್ಪಣೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಪಠ್ಯಪುಸ್ತಕಗಳನ್ನು ಉತ್ತಮವಾಗಿ ರಚಿಸಿ ವಿದ್ಯಾರ್ಥಿಗಳಲ್ಲಿ ಔದ್ಯೋಗಿಕ ಭರವಸೆಯನ್ನು ಬೆಳೆಸುವ, ಆತ್ಮವಿಶ್ವಾಸವನ್ನು ತುಂಬುವ ಮಹತ್ವದ ಕಾರ್ಯವನ್ನು ಪ್ರಸಾರಾಂಗ ಮಾಡುತ್ತಿದೆ ಎಂದು ಹೇಳಿದರು.
ಪಠ್ಯಪುಸ್ತಕಗಳು ಹೊಸ ಹೊಸ ಜ್ಞಾನ ವಿಚಾರಗಳನ್ನು ತಿಳಿಸುವ ಮಹತ್ವದ ಸಾಧನಗಳಾಗಿದ್ದು, ಈ ಮೂಲಕ ವಿದ್ಯಾರ್ಥಿಗಳ ದೈನಂದಿನ ಜೀವನದ ಭಾಗಗಳಾಗಿ ಕಾರ್ಯನಿರ್ವಹಿಸಲು ವಿಶ್ವವಿದ್ಯಾಲಯವು ಮಹತ್ವದ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.

ಇದನ್ನು ಮಿಸ್‌ ಮಾಡದೇ ಓದಿ : ಮಳೆಗೆ ತಾತ್ಕಾಲಿಕ ಬ್ರೇಕ್ : ರಾಜ್ಯದಲ್ಲಿ ಮತ್ತೆ ಸುಡುಬಿಸಿಲು, ತಾಪಮಾನದಲ್ಲಿ ಭಾರಿ ಏರಿಕೆ!

ಇದನ್ನು ಮಿಸ್‌ ಮಾಡದೇ ಓದಿ : ಮಳೆಗೆ ತಾತ್ಕಾಲಿಕ ಬ್ರೇಕ್ : ರಾಜ್ಯದಲ್ಲಿ ಮತ್ತೆ ಸುಡುಬಿಸಿಲು, ತಾಪಮಾನದಲ್ಲಿ ಭಾರಿ ಏರಿಕೆ!

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಪ್ರೊ.ಸಿ.ಬಿ. ಚಿಲ್ಕರಾಗಿ ಅವರು ಮಾತನಾಡಿ, ವಿಶ್ವವಿದ್ಯಾಲಯವು ಪ್ರಕಟಿಸಿದ ಪಠ್ಯಪುಸ್ತಕಗಳು ಪ್ರಾಚೀನ ಮತ್ತು ಆಧುನಿಕ ಕವಿಗಳ ಸಂಗಮವಾಗಿದ್ದು, ವೈವಿಧ್ಯಮಯ ಜ್ಞಾನವನ್ನು ನೀಡುವ ಕಣಜಗಳಾಗಿವೆ, ಹೊಸ ಹೊಸ ಆಲೋಚನೆಗಳನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಮಚಂದ್ರ ಅವರು ಮಾತನಾಡಿ ಈ ವರ್ಷ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ಬಹುಬೇಗ ದೊರೆತಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡುವುದರ ಮೂಲಕ ಉತ್ತಮ ಅಂಕಗಳನ್ನು ಗಳಿಸಬೇಕು ಎಂದು ಕರೆ ನೀಡಿದರು.

ಪ್ರಸಾರಾಂಗದ ನಿರ್ದೇಶಕ ಡಾ.ತಿಪ್ಪೇರುದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಸಾರಾಂಗವು ವಿಶ್ವವಿದ್ಯಾಲಯದ ಹೃದಯವಾಗಿದ್ದು, ವಿದ್ಯಾರ್ಥಿಗಳ, ಜನಸಾಮಾನ್ಯರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸಿ ಜ್ಞಾನ ಪ್ರಸರಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಾಸೌರಭ-3, ವಾಣಿಜ್ಯ ಸೌರಭ-3, ವಿಜ್ಞಾನ ಸೌರಭ-3 ಪಠ್ಯಪುಸ್ತಕಗಳನ್ನು ಸಂಪಾದಿಸಿದ ಡಾ.ಎ.ಎಂ.ರಾಜಶೇಖರಯ್ಯ, ಪ್ರೊ.ನಾಗಣ್ಣ ಕಿಲಾರಿ, ಡಾ.ಮಲ್ಲಿಕಾರ್ಜುನ ಎಂ. ಇವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಕನ್ನಡ ಅಧ್ಯಾಪಕರಾದ ಸರ್ವಮಂಗಳ, ಮಂಜುಳ ಕಾರ್ಯಕ್ರಮವನ್ನು ನಿರೂಪಿಸಿದರು. ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜಿನ ಅಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.