ನವದೆಹಲಿ: ಪಿಂಚಣಿದಾರರಿಗೆ ದೊಡ್ಡ ಪರಿಹಾರವಾಗಿ, ನೌಕರರ ಪಿಂಚಣಿ ಯೋಜನೆ (ಇಪಿಎಸ್) 1995 ಗಾಗಿ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆ (ಸಿಪಿಪಿಎಸ್) ಪ್ರಸ್ತಾಪವನ್ನು ಕೇಂದ್ರವು ಅನುಮೋದಿಸಿದೆ. ಹೊಸ ವ್ಯವಸ್ಥೆಯು ಮಹತ್ವದ ಬದಲಾವಣೆಯಾಗಿದ್ದು, ಇದರಲ್ಲಿ ರಾಷ್ಟ್ರೀಯ ಮಟ್ಟದ ಕೇಂದ್ರೀಕೃತ ವ್ಯವಸ್ಥೆ ಜಾರಿಯಲ್ಲಿರುತ್ತದೆ, ಇದು ಭಾರತದಾದ್ಯಂತ ಯಾವುದೇ ಬ್ಯಾಂಕ್, ಯಾವುದೇ ಶಾಖೆಯ ಮೂಲಕ ಪಿಂಚಣಿ ವಿತರಣೆಗೆ ಅನುವು ಮಾಡಿಕೊಡುತ್ತದೆ. ಇದು ಇಪಿಎಸ್ ಪಿಂಚಣಿದಾರರಿಗೆ ಜನವರಿ 1, 2025 ರಿಂದ ಭಾರತದ ಯಾವುದೇ ಬ್ಯಾಂಕ್, ಶಾಖೆ ಅಥವಾ ಸ್ಥಳದಿಂದ ತಮ್ಮ ಪಿಂಚಣಿಯನ್ನು ಹಿಂಪಡೆಯಲು ಸಹಾಯ ಮಾಡುತ್ತದೆ.
ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯು ಇಪಿಎಫ್ಒನ 78 ಲಕ್ಷಕ್ಕೂ ಹೆಚ್ಚು ಇಪಿಎಸ್ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಈ ಮಹತ್ವದ ನಿರ್ಧಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಡಾ.ಮನ್ಸುಖ್ ಮಾಂಡವಿಯಾ, “ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆ (ಸಿಪಿಪಿಎಸ್) ಅನುಮೋದನೆಯು ಇಪಿಎಫ್ಒ ಆಧುನೀಕರಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಅಂಥ ತಿಳಿಸಿದರು.
ನೌಕರರ ಪಿಂಚಣಿ ಯೋಜನೆಯ ಪಿಂಚಣಿದಾರರು ಈಗ ಜನವರಿ 1, 2025 ರಿಂದ ದೇಶಾದ್ಯಂತ ಯಾವುದೇ ಬ್ಯಾಂಕಿನಿಂದ ತಮ್ಮ ಪಿಂಚಣಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಇದು ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) 78 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯ ಅನುಮೋದನೆಯು ಇಪಿಎಫ್ಒ ಆಧುನೀಕರಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದರು.
ದೇಶದ ಯಾವುದೇ ಬ್ಯಾಂಕ್ ಶಾಖೆಯಿಂದ ಪಿಂಚಣಿ ವಿತರಣೆಯು ಪಿಂಚಣಿದಾರರು ಎದುರಿಸುತ್ತಿರುವ ದೀರ್ಘಕಾಲದ ಸವಾಲುಗಳನ್ನು ಪರಿಹರಿಸುತ್ತದೆ ಎಂದು ಅವರು ಹೇಳಿದರು. ಇಪಿಎಫ್ಒ ಅನ್ನು ಹೆಚ್ಚು ದೃಢವಾದ, ಸ್ಪಂದಿಸುವ ಮತ್ತು ತಂತ್ರಜ್ಞಾನ-ಶಕ್ತ ಸಂಸ್ಥೆಯಾಗಿ ಪರಿವರ್ತಿಸುವ ಪ್ರಯತ್ನಗಳಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಸಚಿವರು ಹೇಳಿದರು. ಪಿಂಚಣಿದಾರರು ತಮ್ಮ ಪಿಂಚಣಿ ಪ್ರಾರಂಭವಾಗುವ ಸಮಯದಲ್ಲಿ ಯಾವುದೇ ಪರಿಶೀಲನೆಗಾಗಿ ಶಾಖೆಗೆ ಭೇಟಿ ನೀಡುವ ಅಗತ್ಯವಿಲ್ಲ, ಮತ್ತು ಬಿಡುಗಡೆಯಾದ ತಕ್ಷಣ ಪಿಂಚಣಿಯನ್ನು ಜಮಾ ಮಾಡಲಾಗುತ್ತದೆ. ಪಿಂಚಣಿದಾರರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡಾಗ ಅಥವಾ ತಮ್ಮ ಬ್ಯಾಂಕ್ ಅಥವಾ ಶಾಖೆಯನ್ನು ಬದಲಾಯಿಸಿದರೂ ಸಹ, ಪಿಂಚಣಿ ಪಾವತಿ ಆದೇಶಗಳನ್ನು (ಪಿಪಿಒ) ಒಂದು ಕಚೇರಿಯಿಂದ ಇನ್ನೊಂದಕ್ಕೆ ವರ್ಗಾಯಿಸುವ ಅಗತ್ಯವಿಲ್ಲದೆ ಭಾರತದಾದ್ಯಂತ ಪಿಂಚಣಿ ವಿತರಣೆಯನ್ನು ಕೇಂದ್ರೀಕೃತ ವ್ಯವಸ್ಥೆಯು ಖಚಿತಪಡಿಸುತ್ತದೆ ಅಂತ ಹೇಳಿದರು.
ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆ ಎಂದರೇನು?
ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆ (ಸಿಪಿಪಿಎಸ್) ಕೇಂದ್ರದ ಉಪಕ್ರಮವಾಗಿದ್ದು, ಇದು ರಾಷ್ಟ್ರೀಯ ಮಟ್ಟದಲ್ಲಿ ಕೇಂದ್ರೀಕೃತ ವ್ಯವಸ್ಥೆಯನ್ನು ಪರಿಚಯಿಸುತ್ತದೆ. ಈ ವ್ಯವಸ್ಥೆಯು ಭಾರತದಲ್ಲಿರುವ ಯಾವುದೇ ಬ್ಯಾಂಕ್ ಅಥವಾ ಶಾಖೆಯ ಮೂಲಕ ಪಿಂಚಣಿ ಪಾವತಿಯನ್ನು ಸುಗಮಗೊಳಿಸುತ್ತದೆ. ಜನವರಿ 1, 2025 ರಿಂದ ಇಪಿಎಫ್ಒನ ನಡೆಯುತ್ತಿರುವ ಐಟಿ ಆಧುನೀಕರಣ ಯೋಜನೆ ಕೇಂದ್ರೀಕೃತ ಐಟಿ ಸಕ್ರಿಯ ವ್ಯವಸ್ಥೆ (ಸಿಟಿಇಎಸ್ 2.01) ಭಾಗವಾಗಿ ಈ ಸೌಲಭ್ಯವನ್ನು ಪ್ರಾರಂಭಿಸಲಾಗುವುದು. ಮುಂದಿನ ಹಂತದಲ್ಲಿ, ಸಿಪಿಪಿಎಸ್ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ (ಎಬಿಪಿಎಸ್) ಸುಗಮ ಪರಿವರ್ತನೆಯನ್ನು ಶಕ್ತಗೊಳಿಸುತ್ತದೆ. ಪಿಂಚಣಿದಾರರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡಾಗ ಅಥವಾ ಅವರ ಬ್ಯಾಂಕ್ ಅಥವಾ ಶಾಖೆಯನ್ನು ಬದಲಾಯಿಸಿದರೂ ಪಿಂಚಣಿ ಪಾವತಿ ಆದೇಶಗಳನ್ನು (ಪಿಪಿಒ) ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ವರ್ಗಾಯಿಸುವ ಅಗತ್ಯವಿಲ್ಲದೆ ಭಾರತದಾದ್ಯಂತ ಪಿಂಚಣಿ ವಿತರಣೆಯನ್ನು ಸಿಪಿಪಿಎಸ್ ಖಚಿತಪಡಿಸುತ್ತದೆ. ನಿವೃತ್ತಿಯ ನಂತರ ತಮ್ಮ ಊರಿಗೆ ತೆರಳುವ ಪಿಂಚಣಿದಾರರಿಗೆ ಇದು ದೊಡ್ಡ ಪರಿಹಾರವಾಗಿದೆ.