ರಾಯಚೂರು ಉತ್ಸವ : ಜನವರಿ 28ರಂದು ಬಾಡಿ ಬಿಲ್ಡಿಂಗ್ ಸ್ಪರ್ಧೆ

Raichur Utsav: Body Building Competition on 28th January

ರಾಯಚೂರು : ಮೀಸ್ಟರ್ ಕಲ್ಯಾಣ ಕರ್ನಾಟಕ 2026 ರಾಜ್ಯಮಟ್ಟದ ಪುರುಷರ ದೇಹದಾರ್ಢ್ಯ ಸ್ಪರ್ಧೆಯು ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಜನವರಿ 28ರ ಸಂಜೆ 4 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸಕ್ತ ದೇಹದಾರ್ಢ್ಯ ಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಯಚೂರು ಉತ್ಸವ: ಜನವರಿ 27ರ ಬೆಳಗ್ಗೆ 6 ಗಂಟೆಗೆ ಸೈಕಲ್ ಮ್ಯಾರಾಥಾನ್ : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ನಿಮಿತ್ತ ಜಿಲ್ಲಾಡಳಿತದಿಂದ ಜನವರಿ 27ರ ಬೆಳಗ್ಗೆ 6 ಗಂಟೆಗೆ ಸೈಕಲ್ ಮ್ಯಾರಾಥಾನ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ.
ಈ ಸೈಕಲ್ ಮ್ಯಾರಾಥಾನ್ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಿAದ ಆರಂಭವಾಗಿ ಬಸವೇಶ್ವರ ಸರ್ಕಲ್, ಲಿಂಗಸುಗೂರು ರೋಡ್, ಯಕ್ಲಾಸಪುರ್, ಯರಮರಸ್, ಬೈಪಾಸ್, ಓಪೆಕ್ ಆಸ್ಪತ್ರೆ, ಗಂಜ್ ಸರ್ಕಲ್, ಬಸವೇಶ್ವರ ಸರ್ಕಲ್ ಮಾರ್ಗವಾಗಿ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪುವುದು. ಈ ಸ್ಪರ್ಧೆಯಲ್ಲಿ ವಿಜೇತರಾಗುವ ಸ್ಪರ್ಧಾಳುಗಳಿಗೆ ಪ್ರಥಮ ಬಹುಮಾನ 10 ಸಾವಿರ ರೂ. ಹಾಗೂ ದ್ವಿತೀಯ ಬಹುಮಾನ 5 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

Raichur Utsav: Body Building Competition on 28th January