ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕಾತಿ : ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

Madhu Bangarappa

ಮಡಿಕೇರಿ: ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಅಂತ ಶಾಲಾ ಶಿಕ್ಷಣ ಸಚಿವ (Minister of School Education) ಮಧು ಬಂಗಾರಪ್ಪ (Madhu Bangarappa)  ಅವರು ಹೇಳಿದ್ದಾರೆ. ಅವರು ಕೊಡಗಿನ (Kodagu) ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು, 

school of education karnataka
school of education karnataka

ಇದೇ ವೇಳೆ ಅವರು ಮಾತನಾಡಿ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ (Government Schools) 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ‌ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಅಂತ ತಿಳಿಸಿದರು. ಇನ್ನೂ ಅವರು ಮಾತನಾಡುತ್ತ ಸರ್ಕಾರಿ ಶಾಲೆಯನ್ನು ಬಲಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)  ನೇತೃತ್ವದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಆ ನಿಟ್ಟಿನಲ್ಲಿ ಪೂರ್ವ ಕಿರಿಯ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಆರಂಭಿಸಲಾಗಿದೆ ಅಂತ ತಿಳಿಸಿದರು.ಅಗತ್ಯ ಇರುವ ಕಡೆಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೂ ಗಮನ ಹರಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ ಅಂತ ತಿಳಿಸಿದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

Siddaramaiah
Image credit: https://www.facebook.com/Siddaramaiah.Official

ರಾಜ್ಯದಲ್ಲಿ 46 ಸಾವಿರ ಸರ್ಕಾರಿ ಶಾಲೆಗಳು, 57 ಸಾವಿರ ಅನುದಾನಿತ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಎಲ್‌ಕೆಜಿ ಯಿಂದ 12ನೇ ತರಗತಿ ವರೆಗೆ ಸುಮಾರು 1.16 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರ ಹಲವು ಸಮಸ್ಯೆಗಳ ನಡುವೆಯೂ ಅಗತ್ಯ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಹೆಚ್ಚಿನ‌ ಒತ್ತು ನೀಡಿದೆ ಅಂತ ತಿಳಿಸಿದರು.

school of education karnataka
school of education karnataka

RECENT NEWS