ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಭರ್ಜರಿ ಸಿಹಿ ಸುದ್ದಿ ನೀಡಿದೆ. ಫೆಬ್ರವರಿ 28 ರಿಂದ ಆರಂಭವಾಗಲಿರುವ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಘೋಷಿಸಲಾಗಿದೆ.
ಉಚಿತ ಪ್ರಯಾಣದ ವಿವರಗಳು: 2026ರ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಸಂಪೂರ್ಣ ಉಚಿತವಾಗಿ ಬಳಸಿಕೊಳ್ಳಬಹುದು.

ಯಾವ ಬಸ್ಸುಗಳಲ್ಲಿ ಅವಕಾಶ?
ನಗರ ಸಾರಿಗೆ (City Bus)
ಹೊರವಲಯದ ಬಸ್ಸುಗಳು (Suburban)
ಸಾಮಾನ್ಯ ಬಸ್ಸುಗಳು (Ordinary)
ವೇಗದೂತ ಬಸ್ಸುಗಳು (Express)
ಗಮನಿಸಬೇಕಾದ ಅಂಶ: ವಿದ್ಯಾರ್ಥಿಗಳು ಈ ಉಚಿತ ಪ್ರಯಾಣದ ಲಾಭ ಪಡೆಯಲು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು (Hall Ticket) ಬಸ್ ನಿರ್ವಾಹಕರಿಗೆ ತೋರಿಸುವುದು ಕಡ್ಡಾಯವಾಗಿದೆ. ಕೆಎಸ್‌ಆರ್‌ಟಿಸಿ ಕೇಂದ್ರ ಕಛೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆಯಲು ಕೋರಿದ್ದಾರೆ.
Good news for 2nd PUC student s: Free travel on KSRTC buses during exams