ಸರ್ಕಾರಿ ಹುದ್ದೆಗಳ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ

vidhana soudha

ಬೆಂಗಳೂರು : ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (As a one time messure) 5 ವರ್ಷಗಳ ಸಡಿಲಿಕೆ ನೀಡಿ ಸರ್ಕಾರವು 2026 ನೇ ಜನವರಿ 29 ರಂದು ಆದೇಶ ಹೊರಡಿಸಿದೆ.

ಇದನ್ನು ಮಿಸ್‌ ಮಾಡದೇ ಓದಿ : pakistan vs namibia : ಉಸ್ಮಾನ್ ತಾರಿಕ್ ಅವರ ಭರ್ಜರಿ ಶತಕ ಪಾಕಿಸ್ತಾನಕ್ಕೆ 102 ರನ್‌ಗಳ ಗೆಲುವು

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳು ಮನವಿ ಸಲ್ಲಿಸಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿರುತ್ತಾರೆ. ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಕೆ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 19 ರಂದು ಉದ್ಯೋಗ : ಮೇಳ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕೇಂದ್ರ ಉದ್ಯೋಗ ಮಹಾನಿರ್ದೇಶನಾಲಯ ಹಾಗೂ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ವತಿಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ನಂ.17, 1ನೇ ಕ್ರಾಸ್, 1ನೇ ಹಂತ, ಪೀಣ್ಯ, ಪೊಲೀಸ್ ಸ್ಟೇಷನ್ ಹಿಂಭಾಗ, ಬೆಂಗಳೂರು ಇಲ್ಲಿ ನಿರುದ್ಯೋಗಿ ವಿಶೇಷಚೇತನ ಯುವಕ – ಯುವತಿಯರಿಗೆ ಉದ್ಯೋಗ ಮೇಳವನ್ನು ಆಯೋಜಿಸಿದೆ.

job fair
job fair

ಈ ಉದ್ಯೋಗಮೇಳದಲ್ಲಿ ಪ್ರತಿಷ್ಠಿತ ಲಾಡ್ವಾ ಸಲ್ಯೂಷನ್ಸ್ ಕಂಪನಿಯ ಉದ್ಯೋಗದಾತರು ಪಾಲ್ಗೊಳ್ಳುತ್ತಿದ್ದು, ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಿದ್ದಾರೆ. ಉದ್ಯೋಗಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಅಂದೇ ಸ್ಥಳದಲ್ಲಿ ನೋಂದಣಿ ಮಾಡಿಕೊಳ್ಳುವುದು. ಆಸಕ್ತ ಅಭ್ಯರ್ಥಿಗಳು ತಪ್ಪದೇ ತಮ್ಮ ವೈಯುಕ್ತಿಕ ವಿವರಗಳನ್ನೊಳಗೊಂಡ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು ಎಂದು ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ಮುಖ್ಯಸ್ಥರಾದ ಶಿವಶಾಂತವೀರ್ ದಿವಾಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

5 years relaxation in recruitment of government posts, state government official order