ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ

Actress Rachita Ram's car driver assaults officer

ಬಳ್ಳಾರಿ : ನಟಿ ಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ.

ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ ಭದ್ರತಾ ನೆಪದಲ್ಲಿ ರಚಿತಾ ರಾಮ್‌ ಕಾರು ಚಾಲಕ, ಜನರನ್ನು ವಾಪಸ್ಸ ಕಳುಹಿಸುತ್ತಿದ್ದ ಈ ವೇಳೆಯಲ್ಲಿ ಅಲ್ಲೇ ಇದ್ದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾನೆ ಎನ್ನಲಾಗಿದೆ.ಈ ವೇಳೇ ಅಧಿಕಾರಿ ರವಿಕುಮಾರ್ ಕಣ್ಣಿಗೆ ಗಾಯವಾಗಿದೆ ಎನ್ನಲಾಗಿದೆ. ಸದ್ಯ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಭದ್ರತೆಯ ನೆಪದಲ್ಲಿ ಸಾರ್ವಜನಿಕರ ಮೇಲೂ ಅಸಭ್ಯ ಹಾಗೂ ಆಕ್ರಮಣಕಾರಿ ವರ್ತನೆ ತೋರಲಾಗಿದೆ ಎಂದು ಸ್ಥಳದಲ್ಲಿದ್ದವರು ಆರೋಪಿಸಿದ್ದಾರೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಈ ಕಾರಣಕ್ಕೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ

ಇದನ್ನು ಮಿಸ್‌ ಮಾಡದೇ ಓದಿ : Vijay-Rashmika wedding : ವಿಜಯ್-ರಶ್ಮಿಕಾ ಮದುವೆ ಕಾರ್ಡ್‌ ವೈರಲ್

ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಬಳ್ಳಾರಿ ಪ್ರವಾಸ : ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಫೆ.17 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ತೋರಣಗಲ್ಲಿನ ವಿದ್ಯಾನಗರ ಟೌನ್ ಶಿಪ್‌ನ ಹಯ್ಯಾತ್ ನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ವ್ಯಾಪ್ತಿಗೆ ಸಂಬAಧಿಸಿದAತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ಅವರು ತಿಳಿಸಿದ್ದಾರೆ.

Actress Rachita Ram’s car driver assaults officer