ಸರ್ಕಾರದ ವಿವಿಧ ಇಲಾಖೆಗಳಿಗೆ ನೇಮಕಾತಿಯ ವಯೋಮಿತಿ 5 ವರ್ಷ ಸಡಿಲಿಕೆ

vidhana soudha

ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಸಂಪುಟ ಕೈಗೊಂಡಿದೆ. ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ಸಡಿಲ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಈವರೆಗೆ ಇದ್ದಂತ ವಯೋಮಿತಿಯನ್ನು ಮತ್ತಷ್ಟು ಸಡಿಲಿಕೆ ಮಾಡಲು ನಿರ್ಧರಿಸಿದೆ. ಎಲ್ಲಾ ವರ್ಗದಗಳಿಗೂ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. 

ಇದನ್ನು ಮಿಸ್‌ ಮಾಡದೇ ಓದಿ : ಕರ್ನಾಟಕದಲ್ಲಿ ಮತ್ತೆ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ನಿಂದ ಗ್ರೀನ್‌ ಸಿಗ್ನಲ್‌

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ‘ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ

ಈವರೆಗೆ ಸಾಮಾನ್ಯ ವರ್ಗಕ್ಕೆ 35 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ಸಡಿಲಿಕೆ ಇತ್ತು. ಇದೀಗ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್.31, 2027ರವರೆಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

siddaramaiah
siddaramaiah

ಪತ್ರಿಕೆಗಳು ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ ಪತ್ರಕರ್ತರು ಕಂದಾಚಾರಗಳು, ಮೌಢ್ಯಗಳಿಗೆ ಒತ್ತು ನೀಡದೇ, ಸಮಾಜದಲ್ಲಿ ವೈಚಾರಿಕತೆ ಮತ್ತು ವೈಜ್ಞಾನಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಶ್ವವಾಣಿ ದಿನಪತ್ರಿಕೆ ವತಿಯಿಂದ ಆಯೋಜಿಸಲಾಗಿದ್ದ ಲೋಕಧ್ವನಿ ಹೆಮ್ಮೆಯ ಸಾಧಕ -2026 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ವಿಶ್ವವಾಣಿಯ ವಿಶ್ವೇಶ್ವರ ಭಟ್ಟರು ಪತ್ರಿಕೋದ್ಯಮಿಯ ಜೊತೆಗೆ ಉತ್ತಮ ಬರಹಗಾರರೂ ಹೌದು. ಇವರು ಸುಮಾರು 110 ದೇಶಗಳಿಗೆ ಭೇಟಿ ನೀಡಿರುವುದು ವಿಶೇಷ. ನಾನು 2016 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ವಿಶ್ವವಾಣಿ ಪತ್ರಿಕೆಯನ್ನು ಉದ್ಘಾಟಿಸಿದ್ದು, ಈಗಲೂ ಮುಖ್ಯಮಂತ್ರಿಯಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಂತಸವೆನಿಸಿದೆ. ವಿಶ್ವೇಶ್ವರ ಭಟ್ಟರು ಕಳೆದ ವರ್ಷ ಪ್ರಾರಂಭಿಸಿದ ಪ್ರವಾಸಿ ಪ್ರಪಂಚ ವಾರಪತ್ರಿಕೆಯನ್ನು ನಾನು ಲೋಕಾರ್ಪಣೆಗೊಳಿಸಿದ್ದರೆಂದು ತಿಳಿಸಿದರು.

ಇಂದಿನ ಕಾರ್ಯಕ್ರಮದಲ್ಲಿ 30 ಜನ ಸಾಧಕರಿಗೆ ಲೋಕಧ್ವನಿ ಹೆಮ್ಮೆಯ ಸಾಧಕ ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಪತ್ರಿಕೆ ಉತ್ತರ ಕನ್ನಡ ಹಾಗೂ ಕೊಪ್ಪಳದಲ್ಲಿ ಪ್ರಕಟಣೆಯಾಗುತ್ತಿದ್ದು, ರಾಜ್ಯಪತ್ರಿಕೆಯಾಗಲಿ ಎಂದು ಆಶಿಸುತ್ತೇನೆ. ಕನ್ನಡ ಮೊದಲ ರಾಜಧಾನಿಯಾಗಿದ್ದ ಬನವಾಸಿಯಿರುವ ಉತ್ತರ ಕನ್ನಡ ಜಿಲ್ಲೆ ರಾಜ್ಯದ ಪ್ರಮುಖ ಜಿಲ್ಲೆಯಾಗಿದೆ ಎಂದರು.

ನಾವೆಲ್ಲರೂ ಮನುಷ್ಯರಾಗಿ ಬಾಳುವುದು ಮುಖ್ಯ : ಹುಟ್ಟು ಆಕಸ್ಮಿಕ , ಸಾವು ಖಚಿತ, ಹುಟ್ಟುಸಾವುಗಳ ನಡುವೆ ನಾವು ಸಾರ್ಥಕತೆ ಕಂಡುಕೊಳ್ಳಬೇಕು. ಯಾವುದೇ ಜಾತಿಧರ್ಮದಲ್ಲಿ ಹುಟ್ಟಿದರೂ ನಾವೆಲ್ಲರೂ ಮನುಷ್ಯರಾಗಿ ಬಾಳುವುದು ಮುಖ್ಯ. ಯಾವ ಜಾತಿಧರ್ಮದ ಆಧಾರದ ಮೇಲೆ ಮನುಷ್ಯತ್ವವನ್ನು ಅಳೆಯಬಾರದು. ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಜಾತಿಧರ್ಮದ ಆಧಾರದ ಮೇಲೆ ಸಮಾಜ ಒಡೆಯಬಾರದು ಎಂದರು.

ಕಂದಾಚಾರಗಳು, ಮೌಢ್ಯಗಳಿಗೆ ಒತ್ತು ನೀಡಬಾರದು : ಪತ್ರಕರ್ತರಾಗಿ ವಸ್ತುನಿಷ್ಠರಾಗಿ ಸತ್ಯವನ್ನು ಹೇಳುವ ಕೆಲಸ ಮಾಡಬೇಕು. ಸಮಾಜಕ್ಕೆ ಉಪಯೋಗವಲ್ಲದ ವಿಚಾರಗಳಿಗೆ ಮಹತ್ವವನ್ನು ನೀಡಬಾರದು.ಕಂದಾಚಾರಗಳು, ಮೌಢ್ಯಗಳಿಗೆ ಒತ್ತು ನೀಡಬಾರದು. ಒಮ್ಮೆ ತಮ್ಮ ಕಾರಿನ ಮೇಲೆ ಕಾಗೆಯೊಂದು ಕೂತಿದ್ದಕ್ಕೆ , ಅಂತೆಯೇ ಚಾಮರಾಜನಗರಕ್ಕೆ ಮುಖ್ಯಮಂತ್ರಿಗಳು ಅವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಯಿತು. ಆದರೆ ಈ ಘಟನೆಯ ನಂತರವೂ ನಾನು ಮುಖ್ಯಮಂತ್ರಿಯಾಗಿಯೇ ಮುಂದುವರೆದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಶಿಕ್ಷಣ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ : ಪತ್ರಕರ್ತರು ಮೌಢ್ಯಗಳಿಗೆ ಒತ್ತು ನೀಡದೆ ಸಮಾಜದಲ್ಲಿ ವೈಚಾರಿಕತೆ, ವೈಜ್ಞಾನಿಕತೆಯನ್ನು ಪ್ರೋತ್ಸಾಹಿಸಬೇಕು. ವಿದ್ಯಾವಂತರು ಕಂದಾಚಾರಗಳನ್ನು ನಂಬುವುದು ಕಂಡುಬರುತ್ತಿದೆ. ಜಾತಿವ್ಯವಸ್ಥೆಯಲ್ಲಿ ಚಲನೆಯಿಲ್ಲ. ಶಿಕ್ಷಣ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ, ಸಮಾನ ಅವಕಾಶ ದೊರೆತರೆ ಎಲ್ಲರೂ ಉತ್ತಮ ಸಾಧನೆಗಳನ್ನು ಮಾಡುತ್ತಾರೆ. ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಶಕ್ತಿ ಬಂದಾಗಲೇ ಜಾತಿ ವ್ಯವಸ್ಥೆ ತೊಲಗುತ್ತದೆ. ಸಮಾನ ಅವಕಾಶ ಮತ್ತು ಪ್ರಯತ್ನಗಳಿದ್ದರೆ ಸಮಾಜದ ಅಶಕ್ತರು ಅಭಿವೃದ್ಧಿ ಹೊಂದುತ್ತಾರೆ. ಪತ್ರಿಕೆಗಳು ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಾ, ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದರು.