ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ಮಾತಿಗೆ ಸ್ಪಂದಿಸಿ: ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚನೆ

Chief Secretary Dr. Shalini Rajneesh instructs

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾವತಿಯವರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳು ವಿನಂತಿಸಿಕೊಂಡಾಗ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲು ಕರೆ ಮಾಡಿದಾಗ ತಕ್ಷಣ ಸ್ಪಂದಿಸುವಂತೆ ಸರ್ಕಾರದ ಎಲ್ಲಾ ಉನ್ನತ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸೂಚಿಸಿ ಸುತ್ತೋಲೆ ಹೊರಡಿಸಿದ್ದಾರೆ.

ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ತಮ್ಮ ಬಳಿ ಇಟ್ಟುಕೊಳ್ಳಬೇಕು. ಜನಪ್ರತಿನಿಧಿಗಳ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ತಿಳಿಸಲಾಗಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಇಂದಿರಾನಗರದಲ್ಲಿ ಒರಿಜಿನಲ್‌ ಮೈಲಾರಿ ಹೋಟೆಲ್‌-1938ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಇದನ್ನು ಮಿಸ್‌ ಮಾಡದೇ ಓದಿ : ವಿಪತ್ತು ನಿರ್ವಹಣೆ : ಸಮುದಾಯಗಳಲ್ಲಿ ಜಾಗೃತಿ ಅಗತ್ಯ- ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಿಲು ಕೆಲವೊಮ್ಮೆ ಜನಪ್ರತಿನಿಧಿಗಳು ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ.

Chief Secretary Dr. Shalini Rajneesh
Chief Secretary Dr. Shalini Rajneesh

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಮಾನ್ಯ ಲೋಕಸಭಾ ಹಾಗೂ ಸಭಾ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸಬೇಕು. ಸದರಿ ಸೂಚನೆಯನ್ನು ತಮ್ಮ ಆಪ್ತ ಶಾಖೆ ಸಿಬ್ಬಂದಿಗಳಿಗೂ ತಿಳಿಸುವಂತೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

All government officials should respond to the voice of the people’s representatives: Chief Secretary Dr. Shalini Rajneesh instructs