ಬಳ್ಳಾರಿ: ಗರ್ಭಿಣಿ ಸ್ತ್ರೀ ಯರಿಗೆ(Pregnant woman) ಪ್ರತಿ ತಿಂಗಳು 9ನೇ ಮತ್ತು 24ನೇ ತಾರೀಖಿನಂದು ಗಂಡಾAತರ ಗರ್ಭಿಣಿಯರ ಆರೋಗ್ಯ ತಪಾಸಣೆ ಕೈಗೊಳ್ಳುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಎಲ್ಲಾ ಗರ್ಭೀಣಿ ಸ್ತ್ರೀ ಯರು ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಹೇಳಿದರು.
ಸೋಮವಾರ, ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ ಹಿನ್ನಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಗನಕಲ್ಲು, ಸಮುದಾಯ ಆರೋಗ್ಯ ಕೇಂದ್ರ ಮೋಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ರ‍್ರಗುಡಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.
ಸಾಮಾನ್ಯವಾಗಿ 12 ವಾರದ ಒಳಗೆ ಗರ್ಭಿಣಿ ಎಂದು ತಿಳಿದ ದಿನವೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸುವ ಮೂಲಕ ತಾಯಿ ಕಾರ್ಡ್ನಲ್ಲಿ ತಮ್ಮ ಎಲ್ಲಾ ಮಾಹಿತಿ ಒದಗಿಸಬೇಕು. ಇಲಾಖೆಯಡಿ ವೈದ್ಯರ ಸೂಚನೆಯಂತೆ ಪ್ರತಿ ತಿಂಗಳು ತೂಕ, ರಕ್ತದ ಪ್ರಮಾಣ ಹಾಗೂ ಇತರೆ ಅಗತ್ಯ ಪರೀಕ್ಷೆಗಳನ್ನು ಮಾಡಿಸುವುದರಿಂದ ಹೆರಿಗೆ ಸಮಯದಲ್ಲಿ ಅನಗತ್ಯ ಒತ್ತಡ ಉಂಟಾಗದAತೆ ಮಾಡಬಹುದಾಗಿದೆ ಎಂದು ತಿಳಿಸಿದರು.
ಇದನ್ನು ಮಿಸ್ ಮಾಡದೇ ಓದಿ: ಸಿಸಿಟಿವಿ ಅಳವಡಿಕೆ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಇದನ್ನು ಮಿಸ್ ಮಾಡದೇ ಓದಿ: ಡಿಸೆಂಬರ್ 13ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

ಪ್ರಸ್ತುತ ಪ್ರತಿ ತಿಂಗಳು 24 ನೇಯ ತಾರೀಖಿನಂದು ಎಲ್ಲಾ ಗರ್ಭಿಣಿ ಸ್ತ್ರೀ ಯರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಮುಖ್ಯವಾಗಿ ಗಂಡಾAತರ ಗರ್ಭಿಣಿಯರು (ಚೊಚ್ಚಲು ಗರ್ಭಿಣಿ, ಎತ್ತರ ಕಡಿಮೆ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕಬ್ಬಿಣಾಂಶ ಕೊರತೆ, ಅವಳಿ-ಜವಳಿ ಗರ್ಭಿಣಿ, ವಿವಾಹವಾಗಿ ಐದಕ್ಕಿಂತ ಹೆಚ್ಚು ವರ್ಷಗಳ ನಂತರ ಗರ್ಭಿಣಿಯಾಗಿರುವುದು, ಮೊದಲ ಹೆರಿಗೆ ಸಿಸೇರಿಯನ್) ಎಂದು ಗುರ್ತಿಸಿದ ನಂತರ ನಿರ್ಲಕ್ಷಿಸುವಂತಿಲ್ಲ ಎಂದು ಮನವರಿಕೆ ಮಾಡಿದರು.

ತೀವ್ರ ರಕ್ತಹೀನತೆಯಂತಹ ಸನ್ನಿವೇಶದಲ್ಲಿ ಸ್ಥಳೀಯವಾಗಿ ನೀಡುವ ಚಿಕಿತ್ಸೆ ಐಎಫ್‌ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ ಮಾಡಬೇಕು. ಸುಧಾರಣೆಯಾಗದಿದ್ದಲ್ಲಿ ತಜ್ಞರ ಬಳಿ ತಪ್ಪದೇ ತೆರಳಬೇಕು. ಅಗತ್ಯವಿದ್ದಲ್ಲಿ ಸ್ಕಾö್ಯನ್ ಮಾಡಿಸಬೇಕು. ಮೊದಲ ಹೆರಿಗೆ ಶಸ್ತçಚಿಕಿತ್ಸೆ ಮೂಲಕವಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಟ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡಬೇಕು. ಇದಕ್ಕಾಗಿ ಅಂತರ ಚುಚ್ಚುಮದ್ದು, ಕಾಪರ್-ಟಿ, ನಿರೋಧ ಬಳಸಲು ಸಲಹೆ ಮಾಡಿದರು.
ವೈದ್ಯರು ಎಲ್ಲಾ ಗರ್ಭಿಣಿಯರ ತಾಯಿಕಾರ್ಡ್ ಪರಿಶೀಲಿಸಿ ಗೆಸ್ಟೋಸಿಸ್ ಸ್ಕೋರ್ ಬಗ್ಗೆ ಪರಿಶೀಲಿಸಲು ಹಾಗೂ ತಾಯಿಕಾರ್ಡ್ನಲ್ಲಿ ಗರ್ಭಿಣಿಯ ಆರೋಗ್ಯ ತಪಾಸಣೆ ಮಾಹಿತಿಯನ್ನು ತುಂಬಲು ವೈದ್ಯರಿಗೆ ಸೂಚಿಸಿದರು. ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ ವೈದ್ಯರ ಸಲಹೆಯಂತೆ ಉಚಿತವಾಗಿ ನೀಡುವ ಕಬ್ಬಿಣಾಂಶ ಮಾತ್ರೆಗಳನ್ನು ಪ್ರತಿದಿನ ಒಂದರAತೆ ಕನಿಷ್ಟ 180 ಹಾಗೂ ಒಂದು ವೇಳೆ ರಕ್ತಹೀನತೆಯ ಪ್ರಮಾಣ ತೀವ್ರವಾಗಿದ್ದಲ್ಲಿ ದಿನಕ್ಕೆ 2 ರಂತೆ 360 ಮಾತ್ರೆಗಳನ್ನು 6 ತಿಂಗಳ ಅವಧಿಯಲ್ಲಿ ಸೇವಿಸಲು ಮತ್ತು ಇದರ ಜೊತೆಯಲ್ಲಿ ದೈಹಿಕವಾಗಿ ಸದೃಢವಾಗಿರಲು ಕ್ಯಾಲ್ಸಿಯಮ್ ಮಾತ್ರೆಗಳನ್ನು ಸಹ ನುಂಗಲು ತಿಳಿಸಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ರೇವಣಸಿದ್ದಪ್ಪ, ಡಾ.ಭಾರತಿ, ಡಾ.ಶರತ್‌ಚಂದ್ರ, ಡಾ.ಸೈಯದ ಹಫೀಜ ಸೇರಿದಂತೆ ಶುಶ್ರೂಷಣಾಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ ವರ್ಗದವರು, ತಾಯಂದಿರು ಉಪಸ್ಥಿತರಿದ್ದರು.
All pregnant women should have regular health check-ups.













Follow Me