ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ಫಾಸ್ಟ್ ಫುಟ್ ತಯಾರಿಕೆ ಕುರಿತು 12 ದಿನಗಳ ಉಚಿತ ತರಬೇತಿಯನ್ನು ಫೆಬ್ರವರಿ 16, 2026 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ : ICC ODI Rankings : ಮತ್ತೆ ಮತ್ತೆ ನಂ 1.. ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ , ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ : 9481506564, 9740982585, 9380162042, 9241482541, 9113880324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಶಾಖೆ, ರುಡ್ ಸೆಟ್ ಸಂಸ್ಥೆಧಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿ -ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಗೆ (ನಗರಸಭೆ ಹಾಗೂ ಪುರಸಭೆ), ಒಟ್ಟು 03 ನಗರ ಸ್ಥಳೀಯ ಸಂಸ್ಥೆಗಳ ನಗರಸಭೆ ಹೆಬ್ಬಗೋಡಿ. ಜಿಗಣಿ ಮತ್ತು ಚಂದಾಪುರ ಪುರಸಭೆ ಮತಕ್ಷೇತ್ರದ ಚುನಾವಣೆ ನಡೆಯಲಿದ್ದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಜನವರಿ 9 ರಿಂದ ಜನವರಿ 22 2026 ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಜನವರಿ 23 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜನವರಿ 27 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನಾವಾಗಿರುತ್ತದೆ.
ಮತದಾನವು ಅಗತ್ಯವಾದಲ್ಲಿ ಫೆಬ್ರವರಿ 4 ರಂದು ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ವರೆಗೆ ನಡೆಯಲಿದೆ. ಅಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 4 ರಿಂದ ಮತಗಳ ಎಣಿಕೆ ಕಾರ್ಯವು ನಡೆಯಲಿದೆ. ಫೆಬ್ರವರಿ 5 ರಂದು ಚುನಾವಣೆಯು ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ ಚುನಾವಣಾ ಅಧಿಕಾರಿಗಳು ಜಿಲ್ಲಾ ಯೋಜನಾ ಸಮಿತಿ ಚುನಾವಣೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Application Invitation for Fast food Fast Food Preparation Training













Follow Me