ಶಿವಮೊಗ್ಗ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಈ ದಿನದಿಂದಲೇ 8ನೇ ವೇತನ ಆಯೋಗ ಜಾರಿ..!
ಇದನ್ನು ಮಿಸ್ ಮಾಡದೇ ಓದಿ: ಉತ್ತಮ ಊಟ-ಆಟ-ಪಾಠದೊಂದಿಗೆ ಮಕ್ಕಳ ಪ್ರಗತಿ: ನ್ಯಾ.ಸಂತೋಷ್ ಎಂ.ಎಸ್
ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ರೂ.25000/-ಗಳ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವಿಶೇಷ ಪ್ರೋತ್ಸಾಹಧನವನ್ನು ಸಂಬAಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುವುದು.

ಅರ್ಜಿ ಸಲ್ಲಿಸಲು ದಿ: 31.12.2025 ಕಡೆಯ ದಿನಾಂಕವಾಗಿದ್ದು, ಅರ್ಜಿಯನ್ನು sevasindhu.karnataka.gov.in ಮೂಲಕ ಸಲ್ಲಿಸಿ ನಂತರ ಸಂಬAಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದು, ಅರ್ಜಿಯೊಂದಿಗೆ ನಿವಾಸಿ ದೃಢೀಕರಣ ಪತ್ರ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಳಿಗೆ ಪ್ರಾಂಶುಪಾಲರಿAದ ದೃಢೀಕರಿಸಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-220206 ಗೆ ಸಂಪರ್ಕಿಸಬಹುದೆAದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Application Invitation for Incentives for those studying B.ED












Follow Me