ಕನ್ನಡ ಶಿಕ್ಷಣ ಯೋಜನೆ ತರಬೇತಿಗೆ ಅರ್ಜಿ ಆಹ್ವಾನ

kannadanadulogo
kannadanadulogo

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವೆಂಬರ್ 01, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿದ್ದು, ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದಾಗಿದೆ.

ಇದನ್ನು ಮಿಸ್‌ಮಾಡದೇ ಓದಿ: ಜನವರಿ 1ರಿಂದ ಬರಲಿವೆ ಈ ಹೊಸ ನಿಯಮಗಳು

ಇದನ್ನು ಮಿಸ್‌ಮಾಡದೇ ಓದಿ: ಕರ್ನಾಟಕ ಸರ್ಕಾರದ 2026ರ ಸಾರ್ವತ್ರಿಕ ರಜಾ ದಿನಗಳ ಪೂರ್ಣ ಪಟ್ಟಿ ಇಲ್ಲಿದೆ

ಕರ್ನಾಟಕದ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗ ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊoಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿಯಿರುತ್ತದೆ.

ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ. 250/- ಡಿಮ್ಯಾಂಡ್ ಡ್ರಾಫ್ಟನ್ನು ಕಳುಹಿಸಿ ಕೊಡಬೇಕು. ನೋಂದಯಿತರಿಗೆ ಇಪ್ಪತ್ತು, ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಮೂವತ್ತೊಂಭತ್ತನೆಯ ತಂಡದ ತರಬೇತಿಯು ಜನವರಿ 2026 ರಿಂದ ಆರಂಭವಾಗುತ್ತಿದ್ದು, ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006, ದೂ. ಸಂ. 0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಪ್ರಭಾರಿ ಅಧಿಕಾರಿಯವರಿಗೆ ಜನವರಿ 10, 2026 ಒಳಗೆ ತಲುಪಿಸಬೇಕು ಎಂದು ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯ ಪ್ರಭಾರಿ ಅಧಿಕಾರಿಗಳಾದ ಡಾ.ಪಿ.ಆರ್. ಧರ್ಮೇಶ್ ಫರ್ನಾಂಡಿಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Application Invitation for Kannada Education Scheme Training