ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಗೆ ಅರ್ಜಿ ಆಹ್ವಾನ

vidhana soudha

ಬೆಂಗಳೂರು : ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿ ಬರುವ ವಿಶ್ವಕರ್ಮ ಮತ್ತು ಅದರ ಉಪ ಜಾತಿಗಳಿಗೆ ಸೇರಿದ ಜನರ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ(ನಗರ) ಜಿಲ್ಲೆಯ ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ, ಗೋವಿಂದರಾಜನಗರ, ವಿಜಯನಗರ ಚಾಮರಾಜಪೇಟೆ, ಚಿಕ್ಕಪೇಟೆ, ರಾಜರಾಜೇಶ್ವರಿ ನಗರ, ಶಾಂತಿನಗರ ಮತ್ತು ರಾಜಾಜಿನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ ಫಲಾಪೇಕ್ಷಿಗಳಿಂದ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ : ಆಗ ಕಾರ್‌, ಈಗ ಬೆಡ್‌ರೂಂ Romance ಮೂಡ್‌ನಲ್ಲಿ ನಟ ಯಶ್‌

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3.00ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳ / ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ.

From-January-24-Malenadu-Handicrafts-Festival-Cereal-Mela-Fruit-Flower-Show-Hemant-N

ಯೋಜನೆಯ ಸೌಲಭ್ಯ ಪಡೆಯುವವರು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 3,00,000/-ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯು ಇದು ಹೊಂದಾಣಿಕೆಯಾಗಬೇಕು.

ಈ ಯೋಜನೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್ ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು 2026 ನೇ ಮಾರ್ಚ್ 6 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಾಲತಾಣ http://kvcdcl.karnataka.gov.in/kn/ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ದೂರವಾಣಿ ಸಂಖ್ಯೆ: 080-23156006 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Application invited for Food Channel (Food Kiosk) project