ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿರುವಬಡತನ ರೇಖೆಗಿಂತ ಕೆಳಮಟ್ಟದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ (ಬಿ.ಇ ಮತ್ತು ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಿಗೆ ಮಾತ್ರ) ಯನ್ನು 2022-23ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ ಯೋಜನೆ ಹಂತ-4ರ ಅಡಿ) ಎಸ್.ಸಿ.ಎಸ್.ಪಿ ಅನುದಾನದಲ್ಲಿ ಅನುಮೋದನೆಗೊಂಡು ಉಳಿಕೆ ಮೊತ್ತವಾದ ರೂ. 24.50 ಲಕ್ಷಗಳ ಅಂದಾಜು ಮೊತ್ತಕ್ಕೆ ಈ ಕಾರ್ಯಕ್ರಮದಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ : 2025-26 ನೇ ಸಾಲಿನ ಜನವರಿ ಆವೃತ್ತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ
ಇದನ್ನು ಮಿಸ್ ಮಾಡದೇ ಓದಿ : ಜೂನಿಯರ್ಗಳನ್ನು ರ್ಯಾಗಿಂಗ್ ಮಾಡಿದ್ದಕ್ಕಾಗಿ, 22 ಮಂದಿ ವಿರುದ್ದ FIR
ಆಸಕ್ತಿಯುಳ್ಳವರು ನಗರಸಭೆ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಫೆವ್ರವರಿ 5 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅಗತ್ಯ ದಾಖಲೆಗಳು: 2025-26ನೇ ಸಾಲಿನ ವ್ಯಾಸಂಗ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಬುಕ್, ಅಂಕಪಟ್ಟಿಗಳು, ಎರಡು ಭಾವಚಿತ್ರಗಳನ್ನು ಸಲ್ಲಿಸಬೇಕು ಎಂದುಗೌರಿಬಿದನೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೌರಿಬಿದನೂರು ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿರುವ ಬಡತನ ರೇಖೆಗಿಂತ ಕೆಳಮಟ್ಟದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ (ಬಿ.ಇ ಮತ್ತು ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಿಗೆ ಮಾತ್ರ) ಯನ್ನು 2022-23ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ ಯೋಜನೆ ಹಂತ-4ರ ಅಡಿ) ಟಿ.ಎಸ್.ಪಿ ಅನುದಾನದಲ್ಲಿ ಅನುಮೋದನೆಗೊಂಡು ಉಳಿಕೆ ಮೊತ್ತವಾದ ರೂ. 17 ಲಕ್ಷಗಳ ಅಂದಾಜು ಮೊತ್ತಕ್ಕೆ ಈ ಕಾರ್ಯಕ್ರಮದಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳವರು ನಗರಸಭೆ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಫೆವ್ರವರಿ 5 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅಗತ್ಯ ದಾಖಲೆಗಳು: 2025-26ನೇ ಸಾಲಿನ ವ್ಯಾಸಂಗ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಬುಕ್, ಅಂಕಪಟ್ಟಿಗಳು, ಎರಡು ಭಾವಚಿತ್ರಗಳನ್ನು ಸಲ್ಲಿಸಬೇಕು ಎಂದು ಗೌರಿಬಿದನೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Application invited for laptop facility