ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:02/03/2026 ರಿಂದ 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಎಂಬ್ರಾಯಡರಿ ಆರಿ ವರ್ಕ್ ಮತ್ತು ಸ್ಯಾರಿ ಕುಚ್ಚು ಹಾಕುವುದು, ಬ್ಲೌಸ್ ಗಳಿಗೆ ಆರಿ ವರ್ಕ್ ಮಾಡುವುದು, ಸ್ಯಾರಿ ಕುಚ್ಚು ಮತ್ತು ಫ್ಯಾಬ್ರಿಕ್ ಪೈಂಟಿAಗ್ ಬಗ್ಗೆ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಇದನ್ನು ಮಿಸ್ ಮಾಡದೇ ಓದಿ : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಜೋ ಸೈಮನ್ ನಿಧನ
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಫೆ. 21 ಬೆಳಿಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು, ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಫೆ. 21 ರೊಳಗೆ ಸಂಸ್ಥೆಯ ದೂ. ಸಂ.: 8970476050/ 9591514154/ 9686248369/ 6363139123/ 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Applications invited for free embroidery training camp