ಶಿವಮೊಗ್ಗ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:19/01/2026 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಇದನ್ನು ಮಿಸ್ ಮಾಡದೇ ಓದಿ : stet result : ಬಿಹಾರ ಶಾಲಾ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ
ಇದನ್ನು ಮಿಸ್ ಮಾಡದೇ ಓದಿ : neeraj chopra : JSW ಸ್ಪೋರ್ಟ್ಸ್ ಪಾಲುದಾರಿಕೆಯನ್ನು ಕೊನೆಗೊಳಿಸಿದ ನೀರಜ್ ಚೋಪ್ರಾ
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಜ 09 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಜ. 09 ರೊಳಗೆ ಸಂಸ್ಥೆಯನ್ನು ದೂ. ಸಂ.: 8970476050/ 9591514154/ 9686248369/ 6363139123 / 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
At the Canara Bank Rural Self-Employment Training Institute in Sonnahallipura, Hoskote Taluk, Bangalore Rural District A free training camp on sheep and goat farming has been organized for unemployed men and women for 13 days from 19/01/2026.
ವಿದ್ಯುತ್ ವ್ಯತ್ಯಯ
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿAದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿAಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ













Follow Me