Free Training : ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ಮತ್ತು ಸೇವೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Sri Dharmasthala Manjunatheshwara Education Trust

ರಾಮನಗರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ(Canara Bank)
ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್(Rudset) ಸಂಸ್ಥೆಯ ವತಿಯಿಂದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಜು. 28 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಇದನ್ನು ಮಿಸ್‌ ಮಾಡದೇ ಓದಿ: ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ (BPL card) ಹಾಗೂ ಆಧಾರ್ ಕಾರ್ಡ್ (Aadhaar card)
ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

RUDSET

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.