ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಬಲಪಡಿಸಲು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಗೆ ವಿಪತ್ತು ನಿರ್ವಹಣೆಯಲ್ಲಿ ನೈಪುಣ್ಯತೆ ಹೊಂದಿದವರನ್ನು ಮಾಸಿಕ ರೂ.48,400/- ಗಳ ಸಂಭಾವನೆಯೊಂದಿಗೆ ತಾತ್ಕಾಲಿಕವಾಗಿ ಏಪ್ರಿಲ್ 02, 2026 ರವರೆಗೆ ಗುತ್ತಿಗೆ ಆಧಾರ ಮೇಲೆ ಮಾಡಿಕೊಳ್ಳಲಾಗವುದು. ಆಸಕ್ತರು ಅರ್ಜಿಗಳನ್ನು ಜನವರಿ 31ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬೆಂಗಳೂರು ನಗರ ಜಿಲ್ಲೆ, ಕಂದಾಯ ಭವನ ಹಿಂಭಾಗ, ಕೆ.ಜಿ.ರಸ್ತೆ, ಬೆಂಗಳೂರು ಇಲ್ಲಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತ/ರೈತ ಮಹಿಳೆಯರಿಗೆ ಮೂರ ದಿನಗಳ ಉಚಿತ ತರಬೇತಿ ಕಾರ್ಯಕ್ರಮ : ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ ರಾಮಕೃಷ್ಣಪುರ, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಆರ್.ಕೆ.ಶಾಲಾ ವತಿಯಿಂದ ಜನವರಿ 27, 2026 ರಿಂದ ಜನವರಿ 29, 2026 ರವರೆಗೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ರೈತ/ರೈತ ಮಹಿಳೆಯರಿಗಾಗಿ ಸೂಕ್ಷ್ಮ ನೀರಾವರಿ ಘಟಕಗಳ ಉಪಯೋಗಗಳು ಮತ್ತು ನಿರ್ವಹಣೆ ಕುರಿತು ಮೂರು ದಿನಗಳ ಉಚಿತ ತರಬೇತಿ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ರೈತರಿಗೆ ನೀರು ಮತ್ತು ಮಣ್ಣು ಸಂರಕ್ಷಣೆ, ರಸಾವರಿ, ನೀರಿನ ಸಮಪ್ರಮಾಣ ಹಂಚಿಕೆ, ಸೂಕ್ಷ್ಮ ನೀರಾವರಿಯ ಸ್ಟ್ರಿಂಕ್ಲರ್ ಮತ್ತು ಡ್ರಿಪ್ ಘಟಕಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು. ಆಸಕ್ತರು ದೂರವಾಣಿ ಸಂಖ್ಯೆ 6363695621 ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Applications invited for the post of District Disaster Management Expert