ರಾಯಚೂರು : 2025-26ನೇ ಸಾಲಿನ ಸಾಧನೆ ಯೋಜನೆಯಡಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸೇವಾ-ಸಿಂಧು ತಂತ್ರಾAಶದಡಿ (ಪೋರ್ಟಲ್) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ್ಭಿಣ, ನಗರ ವಿವಿದೋದ್ದೇಶ ಪುನರ್ವಸತಿ (ಎಂ.ಆರ್.ಡಬ್ಲೂö್ಯ) ಕಾರ್ಯಕರ್ತರನ್ನು ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ರಾಯಚೂರು ಅವರ ದೂರವಾಣಿ ಸಂಖ್ಯೆ:-08532-200992ಗೆ ಕಚೇರಿಯ ಕೆಲಸದ ಸಮಯದಲ್ಲಿ ಸಂಪರ್ಕಿಸಲು ತಿಳಿಸಲಾಗಿದೆ ಎಂದು ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನವರಿ 7ರಂದು ನಾನಾ ಜಯಂತಿಗಳ ಪೂರ್ವಭಾವಿ ಸಭೆ
ರಾಯಚೂರು: ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 7ರಂದು ಬೆಳಗ್ಗೆ 11 ಗಂಟೆಗೆ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ, ಅಂದು ಬೆಳಗ್ಗೆ 11.30ಕ್ಕೆ ಮಹಾಯೋಗಿ ವೇಮನ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ಮತ್ತು ಮಧ್ಯಾಹ್ನ 12 ಗಂಟೆಗೆ ಅಂಬಿಗರ ಚೌಡಯ್ಯ ಜಯಂತಿ ನಿಮಿತ್ತ ಪೂರ್ವಭಾವಿ ಸಿದ್ಧತಾ ಸಭೆ ನಡೆಯಲಿದ್ದು ಆಯಾ ಜಯಂತಿ ಆಚರಣೆಯ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ನಗರದ ಎಲ್ಲಾ ಸಂಘ ಸಂಸ್ಥೆಗಳ ಪ್ರಮುಖರು, ನಾಗರಿಕರು, ಅಧಿಕಾರಿಗಳು ಮತ್ತು ಸಿಬ್ಬಂದಿ ಪೂರ್ವಭಾವಿ ಸಭೆಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು ಉತ್ಸವ ಎಲ್ಲ ಸಂಘಟನೆಗಳ ಪದಾಧಿಕಾರಿಗಳ ಸಭೆ ಜನವರಿ 8ಕ್ಕೆ
ರಾಯಚೂರು : ಜಿಲ್ಲೆಯಲ್ಲಿ ಜನವರಿ 29, 30 ಹಾಗೂ 31ರಂದು ಎಡೆದೊರೆ ನಾಡು ರಾಯಚೂರು ಉತ್ಸವ-2026 ಹಮ್ಮಿಕೊಳ್ಳಲಾಗಿದ್ದು, ಈ ಉತ್ಸವದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 8ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಗೆ ರಾಯಚೂರು ಜಿಲ್ಲೆಯಲ್ಲಿನ ವಿವಿಧ ಎಲ್ಲ ಸಂಘಟನೆಗಳ ಹಾಗೂ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಾಗಲು ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
Applications invited from the Department of Disabled Persons under the Sadhana Scheme













Follow Me