ಬಳ್ಳಾರಿ: ಬಡಜನರು ಆರ್ಥಿಕವಾಗಿ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್(E. Tukaram) ಅವರು ಹೇಳಿದರು.
ಶುಕ್ರವಾರ ನಗರದ ಜಿಪಂ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್‌ನ ತ್ರೆöÊಮಾಸಿಕ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಬ್ಯಾಂಕ್‌ಗಳ ಮುಖಾಂತರ ನಿಗದಿತ ಕಾಲಮಿತಿಯಲ್ಲಿಯೇ ದೊರಕಿಸಿದರೆ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದರು.
ಬಡಜನರು ಹಾಗೂ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ನವರ ಸರಿಯಾದ ಮಾರ್ಗದರ್ಶನ ಹಾಗೂ ಸಹಕಾರ ಅಗತ್ಯವಾಗಿದೆ. ಬ್ಯಾಂಕ್ ಗಳ ವಿಶ್ವಾಸಾರ್ಹತೆ ಹೆಚ್ಚಾಗುವ ರೀತಿಯಲ್ಲಿ ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ನಡೆದುಕೊಳ್ಳಬೇಕು ಎಂದರು.
ಇದನ್ನು ಮಿಸ್ ಮಾಡದೇ ಓದಿ: ಮನೆಯಲ್ಲಿ ಕುಳಿತು ’ಆಧಾರ್’ನಲ್ಲಿರುವ ‘ಮೊಬೈಲ್ ನಂಬರ್’ ಈ ರೀತಿ ಬದಲಿಸಿ!
ಇದನ್ನು ಮಿಸ್ ಮಾಡದೇ ಓದಿ: ಮುನ್ನುಗ್ಗುತ್ತಿದೆ ಭಾರತ ; ಶೇ.8.2ರಷ್ಟು ‘GDP’ ಬೆಳವಣಿಗೆ
ಇದನ್ನು ಮಿಸ್ ಮಾಡದೇ ಓದಿ: ವಿಶ್ವದ ಅತಿ ಎತ್ತರದ 77 ಅಡಿ ರಾಮನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ
ಬಳ್ಳಾರಿ ಜಿಲ್ಲೆ ಕೃಷಿ ಮತ್ತು ಸಣ್ಣ ಉದ್ಯಮಗಳಿಗೆ ಪ್ರಧಾನ ಜಿಲ್ಲೆಯಾಗಿದ್ದು, ರೈತರಿಗೆ, ದುರ್ಬಲರಿಗೆ ಸಾಲ ನೀಡುವಾಗ ವಿನಾ ಕಾರಣ ವಿಳಂಬ ಮಾಡಬಾರದು ಹಾಗೂ ಅವರು ಸಹಾಯಧನಕ್ಕಾಗಿ ಸಲ್ಲಿಸುವ ಅರ್ಜಿಗಳನ್ನು ಸಹ ಯಾವುದೇ ಕಾರಣವಿಲ್ಲದೇ ತಿರಸ್ಕಾರ ಮಾಡುತ್ತಿದ್ದೀರಿ; ಇದು ಸರಿಯಾದ ನಡೆ ಅಲ್ಲ, ದುರ್ಬಲ ವರ್ಗದ ಸಣ್ಣ-ಪುಟ್ಟ ಉದ್ದಿಮೆಗಳಿಗೆ ಹೆಚ್ಚು ಪ್ರೋತ್ಸಾಹಿಸಬೇಕು ಎಂದರು.

ಬ್ಯಾAಕ್ ಅಧಿಕಾರಿಗಳು ಪರಿಣಾಮಕಾರಿ ಅಭಿವೃದ್ಧಿಗಾಗಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಿದರೆ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಸಂಸದ ಈ.ತುಕಾರಾಮ್ ಅವರು ಕಿವಿಮಾತು ಹೇಳಿದರು.
ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಬ್ಯಾಂಕ್ ಗಳು ವಾರ್ಷಿಕವಾರು ಲಾಭಾಂಶ ಪಡೆಯುತ್ತಿದ್ದೀರಿ; ಜಿಲ್ಲೆಯ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಿಎಸ್‌ಆರ್ ಅನುದಾನ ನೀಡಬೇಕು. ಇದರಿಂದ ನಮ್ಮ ಜಿಲ್ಲೆಯ ಅಭಿವೃದ್ಧಿಗೊಳ್ಳಲಿದೆ. ಇದು ಕಡ್ಡಾಯವಾಗಬೇಕು. ಜಿಲ್ಲೆಯಲ್ಲಿ ಡಿಸಿ, ಜಿಪಂ ಸಿಇಒ ಅವರ ಆದೇಶದ ಮೇರೆಗೆ ಅನುದಾನ ಬಳಕೆಯಾಗಬೇಕು ಎಂದು ಅಧಿಕಾರಿಗಳಿಗೆ ಒತ್ತಿ ಹೇಳಿದರು.
ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೆöÊಸಸ್ ಯೋಜನೆಯ ಪ್ರಧಾನಮಂತ್ರಿ ಔಪಚಾರಿಕೀಕರಣವು ಎಲ್ಲಾ ಅಸಂಘಟಿತ ಸೂಕ್ಷö್ಮ ಆಹಾರ ಸಂಸ್ಕರಣಾ ಘಟಕಗಳಿಗೆ ತಾಂತ್ರಿಕ, ವ್ಯಾಪಾರ ಮತ್ತು ಆರ್ಥಿಕ ಬೆಂಬಲವನ್ನು ನೀಡುತ್ತಿದ್ದು, ಇದನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕಿದೆ ಎಂದರು.ಜಿಲ್ಲೆಯಲ್ಲಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೆöÊಸಸ್ ಯೋಜನೆಯಡಿ ನೆರವು ಪಡೆಯಲು ಒಟ್ಟು 211 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ 76 ಮಂದಿಗೆ ಲೋನ್ ನೀಡಲಾಗಿದೆ. 26 ಅರ್ಜಿ ಬಾಕಿ ಇದ್ದು, 104 ಲೋನ್ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಯಾವ ಕಾರಣಕ್ಕಾಗಿ ತಿರಸ್ಕರಿಸಲಾಗಿದೆ? ಬ್ಯಾಂಕ್ ವಾರು ತಿರಸ್ಕರಿಸಿದ ಅರ್ಜಿಗಳ ಮಾಹಿತಿ ಎಲ್ಲಿ? ಇದರಿಂದ ಬಡವರ ಸಣ್ಣ ಉದ್ಯಮಗಳ ಮೇಲೆ ಪ್ರಭಾವ ಬೀರಲಿದ್ದು, ಇದು ಸಮಂಜಸವಾದುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಪ್ರಸಕ್ತ ವಾರ್ಷಿಕ ಸಾಲ ಯೋಜನೆಯಡಿ ಸೆಪ್ಟಂಬರ್ 2025 ರವರೆಗೆ ಕೃಷಿ, ಶಿಕ್ಷಣ, ವಸತಿ, ಕೈಗಾರಿಕೆ, ಸಾಮಾಜಿಕ ಬೆಳವಣಿಗೆ ಸೇರಿದಂತೆ ಆದ್ಯತಾ ವಲಯಕ್ಕೆ ಮಂಜೂರು ಮಾಡಿರುವ ಅನುದಾನವನ್ನು ನಿಗದಿತ ಕಾಲಾವಧಿಯೊಳಗೆ ಗುರಿ ತಲುಪಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಪಿಎಂ ವಿಶ್ವಕರ್ಮ ಯೋಜನೆಯ ಕುರಿತು ಜನರಿಗೆ ಅರಿವು ಮಾಹಿತಿ ಕೊರತೆ ಇದೆ, ಈ ಸೌಲಭ್ಯ 2028 ಕ್ಕೆ ಮುಕ್ತಾಯಗೊಳ್ಳಲಿದ್ದು, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದರಲ್ಲದೇ, ಈಗಾಗಲೇ ಲೋನ್ ಪಡೆದವರ ಬ್ಯಾಂಕ್ ಖಾತೆಗಳಿಂದ ರಾಜ್ಯ ಸರ್ಕಾರದ ಗೃಹಲಕ್ಷಿö್ಮ ಹಣ ಖಾತೆಗಳಿಗೆ ಜಮಾವಣೆ ಸಂದರ್ಭದಲ್ಲಿ ಸ್ವಯಂಚಾಲಿತವಾಗಿ ಕಡಿತಗೊಳ್ಳುತ್ತಿದ್ದು, ಇದನ್ನು ಪರ್ಯಾಯವಾಗಿ ತಡೆಹಿಡಿಯಬೇಕು. ಆ ರೀತಿಯಾಗಿ ಕಡಿತ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಪ್ರಧಾನಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆಯಡಿ ಅರ್ಹರು ಸೌರಫಲಕ ಅಳವಡಿಸಿಕೊಳ್ಳುವವರಿಗೆ ಸೌಲಭ್ಯ ನೀಡಬೇಕು. ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಇದೇ ವೇಳೆ ಉದ್ಯೊಗಿನಿ, ಪಿಎಂಇಜಿಪಿ, ಪಿಎಂ ಸ್ವನಿಧಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.ಸಭೆಗೂ ಮುನ್ನ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಿದರು. ಪಿಎಂಎಫ್‌ಎAಇ ಯೋಜನೆಯಡಿ ನೋಂದಾಯಿಸಿಕೊAಡಿದ್ದವರಿಗೆ ಲೋನ್ ನೀಡಿರುವ ಆದೇಶ ಪ್ರತಿ ವಿತರಿಸಿದರು. ನಲ್ ಜಲ್ ಮಿತ್ರ ಕಾರ್ಯಕ್ರಮದಡಿ ಕಿಟ್ ಮತ್ತು ಆದೇಶ ಪ್ರತಿ ನೀಡಿದರು.ಈ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ಎಜಿಎಂ ಅರುಣ್ ಕುಮಾರ್, ಕೆನರಾ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕ ಅರುಣ್ ಕುಮಾರ್ ಎ.ಜಿ., ಲೀಡ್ ಬ್ಯಾಂಕ್ ಮ್ಯಾನೇಜರ್ ಗಿರೀಶ್ ವಿ.ಕುಲಕರ್ಣಿ, ನಬಾರ್ಡ್ ನ ಎಜಿಎಂ ಯುವರಾಜ ಕುಮಾರ್ ಆರ್.ಎಸ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಬ್ಯಾಂಕ್ ಗಳ ಅಧಿಕಾರಿಗಳು ಹಾಜರಿದ್ದರು.













Follow Me