ಬೆಂಗಳೂರು : ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಮಾರಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.
ಪಡಿತರ ಚೀಟಿ ಲಕ್ಷಾಂತರ ಭಾರತೀಯ ಕುಟುಂಬಗಳಿಗೆ ನಿರ್ಣಾಯಕ ದಾಖಲೆಯಾಗಿ ಉಳಿದಿದೆ. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಗೋಧಿ ಮತ್ತು ಅಕ್ಕಿಯಂತಹ ಸಬ್ಸಿಡಿ ಧಾನ್ಯಗಳನ್ನು ಪಡೆಯಲು ಅವಕಾಶವನ್ನು ಖಚಿತಪಡಿಸುವುದಲ್ಲದೆ, ಫಲಾನುಭವಿಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, 2026 ರಲ್ಲಿ, ಒಂದು ಸಣ್ಣ ತಪ್ಪು ಅಥವಾ ನಿರ್ಲಕ್ಷ್ಯವು ನಿಮ್ಮ ಪಡಿತರ ಚೀಟಿಯನ್ನು ರದ್ದುಗೊಳಿಸಲು ಕಾರಣವಾಗಬಹುದು, ಇದರ ಪರಿಣಾಮವಾಗಿ ಅಗತ್ಯ ಸರ್ಕಾರಿ ಸವಲತ್ತುಗಳೂ ಬಂದ್ ಆಗಬಹುದು.
ಇದನ್ನು ಮಿಸ್ ಮಾಡದೇ ಓದಿ : ಸಿಇಟಿ2026 ನೋಂದಣಿ ಅವಧಿ ವಿಸ್ತರಣೆ; ಫೆಬ್ರವರಿ 22 ರೊಳಗೆ ಅರ್ಜಿ ಸಲ್ಲಿಸಿ
ಇದನ್ನು ಮಿಸ್ ಮಾಡದೇ ಓದಿ : ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ
ಫೆಬ್ರವರಿ 2026 ರ ಮಾಹೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಯಚೂರು ಜಿಲ್ಲೆಯ ಕೇಂದ್ರ ವ್ಯಾಪ್ತಿಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 35 ಕೆ.ಜಿ ಸಾರವರ್ಧಿತ (Fortified) ಅಕ್ಕಿ ಹಾಗೂ ಕೇಂದ್ರ ವ್ಯಾಪ್ತಿಯ ಪಿ.ಹೆಚ್.ಹೆಚ್ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 05 ಕೆ.ಜಿ ಸಾರವರ್ಧಿತ (Fortified) ಅಕ್ಕಿ ಇದರ ಜೊತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಏಕ ಸದಸ್ಯ, ದ್ವಿ ಸದಸ್ಯ ಮತ್ತು ತ್ರಿ ಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕಿಂತ ಹೆಚ್ಚಿನ ಸದಸ್ಯರುಳ್ಳ ಕೇಂದ್ರ & ರಾಜ್ಯ ವ್ಯಾಪ್ತಿಯ ಅಂತ್ಯೋದಯ(ಎಎವೈ) ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 05 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು.

ಒಂದು ರಾಷ್ಟ್ರ ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಛೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.
ಸದರಿ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಸದರಿ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದೆಂದು ತಿಳಿಸಿದೆ.
Beware, if you sell Annabhagya rice, your ration card will be cancelled.