ಶಿವಮೊಗ್ಗ: ಭಾರತ್ ಪೆಟ್ರೋಲಿಯಂ ಸಂಸ್ಥೆ, ಮಂಗಳೂರು ಪ್ರದೇಶದ ಭಂಟ್ವಾಳ ತಾಲ್ಲೂಕಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಜ. 12 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.
ಇದನ್ನು ಮಿಸ್ ಮಾಡದೇ ಓದಿ : RCB–ಮುಂಬೈ ಮುಖಾಮುಖಿ: ಮೊದಲ ಪಂದ್ಯ ಯಾವಾಗ, ಎಷ್ಟು ಗಂಟೆಗೆ?
ವಿದ್ಯುತ್ ವ್ಯತ್ಯಯ : ಕುಂಸಿ ಉಪವಿಭಾಗದ ಹಾರಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್.ಟಿ. ರೀ-ಕಂಡ್ನರಿAಗ್ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಜ.10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿAದ ಸರಬರಾಜಾಗುವ ಹಳ್ಳಿಗಳಾದ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ವಿಠಗೊಂಡನಕೊಪ್ಪ, ವಿರಣ್ಣನಬೇನವಳ್ಳಿ, ಕೆಸುವಿನ ಕಟ್ಟೆ, ಸೇವಲಾಲ್ ನಗರ ಹಾಗೂ ನಾಗರಭಾವಿ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನೀರಿನ ಬಾಕಿ ಕಂದಾಯ ಪಾವತಿಸಲು ವಿಶೇಷ ಕೌಂಟರ್ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಜ. 11 ರಂದು ನಗರದ ಕೆಲವು ಸ್ಥಳಗಳಲ್ಲಿ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.
ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ ಹತ್ತಿರ, ರವೀಂದ್ರನಗರ ಗಣಪತಿ ದೇವಸ್ಥಾನದ ಹತ್ತಿರ, ಸೋಮಿನಕೊಪ್ಪ ರಸ್ತೆ ಪೆಟ್ರೋಲ್ ಬಂಕ್ ಹತ್ತಿರ-ದೇವರಾಜ ಅರಸ್ ಬಡಾವಣೆ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ, ಗುಂಡಪ್ಪಶೆಡ್ ಮಾಸ್ತಾಂಬಿಕ ದೇವಸ್ಥಾನದ ಪಾರ್ಕ್ ಹತ್ತಿರ. ಈ ಸ್ಥಳಗಳಲ್ಲಿ ಕೌಂಟರ್ ತೆರೆಯಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













Follow Me