ಬೆಳಗಾವಿ: ಬೈಲಹೊಂಗಲ ತಾಲೂಕಿನ ಮಾರ್ಕುಂಬಿ ಗ್ರಾಮದ ಇನಾಮದಾರ್ ಶುಗರ್ಸ್‌ನಲ್ಲಿ ಬುಧವಾರ ಬಾಯ್ಲರ್ ಸ್ಫೋ***ಟಗೊಂಡು ಮೂವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೆಳಗಾವಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ: ನಿಮ್ಮ ಮಕ್ಕಳು ಹುಟ್ಟಿದಾಗಿನಿಂದ-16 ವರ್ಷದವರೆಗೂ ಈ ಲಸಿಕೆಗಳನ್ನು ತಪ್ಪದೇ ಹಾಕಿಸಿ
Boiler explosion at sugar factory in Belgaum Three dead
ಶಿವಮೊಗ್ಗ : ಫೆಲೋಶಿಪ್ ಲೇಖನಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ, ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಸಾಮಾನ್ಯ- 1, ಪರಿಶಿಷ್ಟ ಜಾತಿ – 5 ಮತ್ತು ಪರಿಶಿಷ್ಟ ಪಂಗಡ – 9 ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ (Synopsis) ವನ್ನು ಬರೆದು ಜ. 23 ರ ಒಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡುವಂತೆ ಅಕಾಡೆಮಿ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ ವೆಬ್‌ಸೈಟ್ https://janapada.karnataka.gov.in ನಿಂದ ಮಾಹಿತಿ ಪಡೆಯಬಹುದಾಗಿದೆ. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು.
ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನ
ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ (ಫೆ.10, 2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು) ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹೊಸ ವಿದ್ಯಾರ್ಥಿಗಳಿಂದ ಮಾತ್ರ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದೃಢೀಕೃತ ದಾಖಲಾತಿಗಳನ್ನು ಲಗತ್ತಿಸಿ ದಿ: 09/01/2026 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ವೆಬ್‌ಸೈಟ್ https://bcwd.karnataka.gov.in, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222129 ನ್ನು ಸಂಪರ್ಕಿಸುವುದು.













Follow Me