Karnataka SSLC Exam Results | SSLC ಪರೀಕ್ಷೆಯ ಫಲಿತಾಂಶ ಪ್ರಕಟ, ಇಲ್ಲಿದೆ ಜಿಲ್ಲಾವಾರು ವಿವರ..!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) 10 ನೇ ತರಗತಿ ಎಸ್ಎಸ್ಎಲ್ಸಿ -1 ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಮೇ 2, 2025 ರಂದು ಬೆಳಿಗ್ಗೆ 11:45ಕ್ಕೆ ಬೆಂಗಳೂರಿನ ಕೆಎಸ್ಇಎಬಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದರಲ್ಲಿ ಶಿವಮೊಗ್ಗದ ನಮನ, ಮಂಡ್ಯದ ಧೃತಿ ಹಾಗೂ ಬೆಂಗಳೂರಿನ ಭಾವನಾ ಸೇರಿ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್ ಪಡೆದುಕೊಂಡಿದ್ದಾರೆ.

ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಬಿಡುಗಡೆ ಮಾಡಿ ಮಾತನಾಡಿದರು. ಇದೇ ವೇಳೇ ಅವರು ಮಾತನಾಡಿ, ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು, ಇದಲ್ಲದೇ ಗೆಸ್ಟ್‌ ಟೀಚರ್‌ಗಳನ್ನು ಕೂಡ ನೇಮಕ ಮಾಡಿಕೊಳ್ಳಲಾಗಿತ್ತು, ಇದಲ್ಲದೇ ಸಂಜೆ ಶಾಲೆಗಳಿಗೆ ಉಚಿತವಾಗಿ ವಿದ್ಯುತ್‌ ಅನ್ನು ಕೂಡ ನೀಡಲಾಗಿತು ಅಂತ ತಿಳಿಸಿದರು. ಇನ್ನೂ ಈ ಸಾರಿ ಶೇ 66.14 ಮಂದಿ ಪಾಸಾಗಿದ್ದಾರೆ ಅಂತ ತಿಳಿಸಿದರು. 16 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದ 2,818 ಕೇಂದ್ರಗಳಲ್ಲಿ ಕರ್ನಾಟಕದಲ್ಲಿ ಎಕ್ಸಾಂ ನಡೆಸಲಾಯಿತು. ಈ ಬಾರಿ 4,61,563 ಬಾಲಕರು ಮತ್ತು 4,34,884 ಬಾಲಕಿಯರು ಸೇರಿದಂತೆ ಒಟ್ಟು 8,96,447 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿದ್ದರು. ಸುಗಮ ಮತ್ತು ಸಮಯೋಚಿತ ಮೌಲ್ಯಮಾಪನವನ್ನು ಖಚಿತಪಡಿಸಿಕೊಳ್ಳಲು, 240 ಮೌಲ್ಯಮಾಪನ ಕೇಂದ್ರಗಳಲ್ಲಿ 65,000 ಮೌಲ್ಯಮಾಪಕರನ್ನು ನಿಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಮಧ್ಯಾಹ್ನ 12:30 ರಿಂದ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2025 ಅನ್ನು ಅಧಿಕೃತ ವೆಬ್ಸೈಟ್ಗಳಾದ karresults.nic.in ಅಥವಾ kseab.karnataka.gov.in ನಲ್ಲಿ ಪರಿಶೀಲಿಸಬಹುದು.

ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿಗಳು ಮೇಲೆ ತಿಳಿಸಿರುವ ಯಾವುದೇ ವೆಬ್ಸೈಟ್ಗೆ ಭೇಟಿ ನೀಡಿ, “ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2025” ಲಿಂಕ್ ಅನ್ನು ಕ್ಲಿಕ್ ಮಾಡಿ, ಮತ್ತು ಅಗತ್ಯವಿರುವ ಕ್ಷೇತ್ರಗಳಲ್ಲಿ ತಮ್ಮ ರೋಲ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಬೇಕು. ವಿವರಗಳನ್ನು ಸಲ್ಲಿಸಿದ ನಂತರ, ಫಲಿತಾಂಶಗಳನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಡೌನ್ಲೋಡ್ ಮಾಡುವುದು ಅಥವಾ ಮುದ್ರಿಸುವುದು ಸೂಕ್ತವಾಗಿದೆ.