ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ಸುಗಳನ್ನು ಬಿಡಬೇಕು : ಮಧು ಹೆಚ್.ಎಂ

Buses should be allowed to run without causing any inconvenience to students: Madhu HM

ಶಿವಮೊಗ್ಗ : ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ನಿಗದಿತ ವೇಳಾಪಟ್ಟಿಯಂತೆ ಬಸ್ಸುಗಳನ್ನು ಬಿಡಲು ಕ್ರಮ ವಹಿಸಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಶುಕ್ರವಾರ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.
75 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಾಗಿಲಿಗೇ ಪಡಿತರ ತಲುಪಿಸುವ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ಅನ್ನ ಸುವಿಧಾ ಯೋಜನೆಯನ್ನು ವೃದ್ದರಿಗೆ ಸಮರ್ಪಕವಾಗಿ ತಲುಪಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ಗೆ ಪರಿವರ್ತನೆಯಾಗಿರುವ ಫಲಾನುಭವಿಗಳ ಕುರಿತು ಪರಿಶೀಲಿಸಿ, ಅರ್ಹರನ್ನು ಗುರುತಿಸಿ ಬಡವರಿಗೆ ನ್ಯಾಯ ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

KSRTC
KSRTC

ಸ್ನಾತಕೋತ್ತರ ಪದವಿ ಕಾಲೇಜಿಗೆ ಭೇಟಿ ನೀಡಿ ಯುವನಿಧಿ ಯೋಜನೆಯ ಬಗ್ಗೆ ಪ್ರಚಾರ ಮಾಡಬೇಕು ಹಾಗೂ ತಾಲ್ಲೂಕಿನಲ್ಲಿ 174202 ಗ್ರಾಹಕರಿದ್ದು ಗೃಹಜ್ಯೋತಿ ಯೋಜನೆಯಡಿ 1,56,445 ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಹೊಸದಾಗಿ ನೊಂದಾಯಿಸಿಕೊAಡ ಫಲಾನುಭವಿಗಳಿಗೆ ಸಮರ್ಪಕವಾಗಿ ಗೃಹಜ್ಯೋತಿ ಯೋಜನೆಯನ್ನು ತಲುಪಿಸಬೇಕೆಂದು ಸೂಚಿಸಿದರು.

ಗೃಹಲಕ್ಷಿö್ಮ ಯೋಜನೆಯಡಿ ಶಿವಮೊಗ್ಗ ತಾಲ್ಲೂಕಿನಲ್ಲಿ 107722 ಮಹಿಳೆಯರು ನೋಂದಣಿಯಾಗಿದ್ದು, 2044 ಐಟಿ/ಜಿ.ಎಸ್.ಟಿ ಫಲಾನುಭವಿಗಳಿದ್ದು 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮರಣ ಹೊಂದಿರುವ 332 ಮಹಿಳಾ ಫಲಾನುಭವಿಗಳ ಅರ್ಜಿಗಳನ್ನು ಪತ್ತೆ ಹಚÀ್ಚಲಾಗಿದ್ದು, 42 ಫಲಾನುಭವಿಗಳಿಗೆ ಎನ್.ಪಿ.ಸಿ.ಐ ಬಾಕಿ ಇರುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಮರ್ಪಕವಾಗಿ ಜಮಾ ಮಾಡಲು ಸೂಚಿಸಿದರು.

ಯುವನಿಧಿ ಯೋಜನೆಯಡಿಯಲ್ಲಿ ಒಟ್ಟು 11085 ವಿದ್ಯಾರ್ಥಿಗಳು ನೋಂದಣಿಯನ್ನು ಮಾಡಿಕೊಂಡಿದ್ದು, ಸೆಪ್ಟಂಬರ್ ಮಾಹೆವರೆಗೆ ರೂ.1.56 ಕೋಟಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ. ಹಾಗೂ ಶಕ್ತಿ ಯೋಜನೆಯಡಿ ಮಹಿಳೆಯರು 2,47,80,592 ಬಾರಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 1,69,0079 ಪಡಿತರದಾರರಿಗೆ 15248.38 ಕ್ವಿಂಟಾಲ್ ಅಕ್ಕಿಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಸದಸ್ಯರು, ಆಹಾರ ಇಲಾಖೆ, ಸಾರಿಗೆ ಇಲಾಖೆ, ನಗರಸಭೆ ಹಾಗೂ ಮೆಸ್ಕಾಂ ಅಧಿಕಾರಿಗಳು ಹಾಜರಿದ್ದರು.

Buses should be allowed to run without causing any inconvenience to students Madhu HM