ಚಿತ್ರದುರ್ಗ ಬಸ್ ದುರಂತ ಪ್ರಕರಣ : ಮೃತ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Siddaramaiah
Image credit: https://www.facebook.com/Siddaramaiah.Official

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಎಂ ಸಿದ್ದರಾಮಯ್ಯ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಇದನ್ನು ಮಿಸ್‌ ಮಾಡದೇ ಓದಿ: ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಇಂದಿನ ಮಾರುಕಟ್ಟೆ ದರ

ಇದನ್ನು ಮಿಸ್ ಮಾಡದೇ ಓದಿ: ಚಿತ್ರದುರ್ಗ/ತುಮಕೂರು : ಹಿರಿಯೂರು-ಶಿರಾ ಬಳಿ ಭೀಕರ ಬಸ್ ದುರಂತ, ಐವರು ಸಜೀವ ದಹನ

ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Horrific bus accident near Hiriyur-Shira, five burnt alive
Horrific bus accident near Hiriyur-Shira, five burnt alive

ಘಟನೆ ವಿವರ

ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 11 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್.

Horrific bus accident near Hiriyur-Shira, five burnt alive
Horrific bus accident near Hiriyur-Shira, five burnt alive

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 11 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.

Chitradurga bus tragedy case