ರಾಜ್ಯದಲ್ಲಿ ಹಂತ ಹಂತವಾಗಿ 1.18 ಲಕ್ಷ ಹುದ್ದೆಗಳ ಭರ್ತಿ : CM ಸಿದ್ದರಾಮಯ್ಯ ಘೋಷಣೆ

CM Siddaramaiah's advice
CM Siddaramaiah's advice

ಬೆಳಗಾವಿ : ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಂತ ಹಂತವಾಗಿ 1,88,037 ನ್ನು ಭರ್ತಿ ಮಾಡಲಾಗುವುದು, ಆರ್ಥಿಕ ಇಲಾಖೆ 24,300 ಹುದ್ದೆಗಳ ಭರ್ತಿಗೆ ಅನುಮೋದನೆ ದೊರಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದರಾಮಯ್ಯ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

CM Siddaramaiah's advice
CM Siddaramaiah’s advice

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

CM Siddaramaiah's advice
CM Siddaramaiah’s advice

ಇನ್ನು ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೆಬಲ್ ಗಳನ್ನು ನೇರ ನೇಮಕಾತಿ ಹಾಗೂ 14 ಪಿಎಸ್ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆಯನ್ನು ಸಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

CM Siddaramaiah announces filling of 1.18 lakh posts in the state in a phased manner