ಕನ್ನಡ ನಾಡು ಡಿಜಿಟಲ್ ಡೆಸ್ಕ್ : ಡಾರ್ಲಿಂಗ್ ಕೃಷ್ಣ ನಟನೆಯ ‘ಲವ್ ಮಾಕ್ಟೇಲ್–3’ ಚಿತ್ರದ ‘ಒಬ್ಬಂಟಿಯಾದೆ ನಾ’ ಹಾಡು ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದ್ದು ಹೊಸ ಸದ್ದು ಮಾಡುತ್ತಿದೆ.
ಈ ಹಾಡು ಸಾಮಾಜಿಕ ಜಾಲತಾಣಗಳ ತುಂಬೆಲ್ಲ ಹರಿದಾಡುತ್ತಾ, ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಈ ಹಿಂದೆ ‘ಲವ್ ಮಾಕ್ಟೇಲ್‘ ಹಾಗೂ ‘ಲವ್ ಮಾಕ್ಟೇಲ್-2‘ ಚಿತ್ರದ ‘ದೂರ ಹೋದರು ನನ್ನೊಲವೇ‘, ‘ಲವ್ ಯೂ ಚಿನ್ನಾ‘ ಮತ್ತು ‘ಜನುಮಗಳೇ ಕಾಯುವೆ‘ ಹಾಡುಗಳು ಪ್ರೇಕ್ಷಕರನ್ನು ಸೆಳೆದಿದ್ದವು ಕೂಡ.

ಮಾತು ಮೌನವಾಗಿದೆ ಶೋಕ ಭಾವ ಮೂಡಿದೆ ಎಂಬ ಸಾಲುಗಳೊಂದಿಗೆ ಶುರುವಾಗುವ ಈ ಹಾಡನ್ನು ರಾಘವೇಂದ್ರ ಕಾಮತ್ ಬರೆದಿದ್ದಾರೆ. ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ಮಾಡಿ, ಸ್ವತಃ ಧ್ವನಿಯಾಗಿದ್ದಾರೆ. ಈಗಾಗಲೇ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಹತ್ತಿರಾಗಿರುವ ಲವ್ ಮಾಕ್ಟೇಲ್3 ಇದೇ ಏಪ್ರಿಲ್ 10ರಂದು ರಾಜ್ಯಾದ್ಯಂತ ತೆರೆಗಾಣಲಿದೆ.
ಕ್ರಿಸ್ಮಿ ಬ್ಯಾನರಿನಡಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.
Darling Krishna starrer ‘Love Mocktail-3’ song released