K.C.Venugopal | ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

K.C.Venugopal at Mangalore
K.C.Venugopal at Mangalore

ಮಂಗಳೂರು: ಮಂಗಳೂರು ವಿಮಾನ ನಿಲ್ದಾನದಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ‌ ನಾರಾಯಣಗುರು‌ ಅಧ್ಯಯನ‌ ಪೀಠ, ಮಂಗಳೂರು‌ ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವ, ಯತಿ ಪೂಜೆಯನ್ನು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೆ.ಸಿ.ವೇಣುಗೋಪಾಲ್ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ .ಸಿ.ವೇಣುಗೋಪಾಲ್ ಬರುತ್ತಿದ್ದಂತೆ ಕಾರ್ಯಕರ್ತರ ಕಡೆಯಿಂದ ಡಿಕೆಶಿ ಪರ ಘೋಷಣೆ ಜೋರಾಗಿ ಕೇಳಿ ಬಂದ ಘಟನೆ ನಡೆಯಿತು.

ಇದನ್ನು ಮಿಸ್‌ ಮಾಡದೇ ಓದಿ: ನಟ ದರ್ಶನ್‌ಗೆ ಬಿಗ್‌ ಶಾಕ್‌: ಆದಾಯ ತೆರಿಗೆ ಇಲಾಖೆಗೆ 82 ಲಕ್ಷ

ಇದನ್ನು ಮಿಸ್‌ ಮಾಡದೇ ಓದಿ: `SBI’ ನಲ್ಲಿ 996 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ

 

Siddaramaiah and DCM DK Shivakumar
Siddaramaiah and DCM DK Shivakumar

ಈ ನಡುವೆ ಸಿಎಂ ಬದಲಾವಣೆ ಬಗ್ಗೆ ಮಾಧ್ಯಮದವರು ಪ್ರಶ್ನಿಸಲು ಪ್ರಯತ್ನಿಸಿದರೂ ಕೆ.ಸಿ.ವೇಣುಗೋಪಾಲ್ ಪ್ರತಿಕ್ರಿಯಿಸಲು‌ ನಿರಾಕರಿಸಿದರು ಕೂಡ. ಇದಲ್ಲದೇ ಇನ್ನೂ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದು, ಲೋಕಸಭೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಕೆ.ಸಿ. ವೇಣುಗೋಪಾಲ್ ಪ್ರಧಾನ ಸಂದೇಶ ಭಾಷಣ ಮಾಡಲಿದ್ದಾರೆ. ಶಿವಗಿರಿ ಮಠದ ಸ್ವಾಮೀಜಿ ಶುಭಾಂಗಾನಂದ ಪರಿನಿರ್ವಾಣ ಸಂದೇಶ ಭಾಷಣ ಮಾಡಲಿದ್ದಾರೆ. ಶಿವಗಿರಿ ಮಠದ ಶ್ರೀಮತ್ ಶಾರದಾನಂದ, ಸ್ವಾಮಿ ರೀತಾಂಭರಾನಂದ, ಸ್ವಾಮಿ ಆಸಂಗಾನಂದಗಿರಿ, ಸ್ವಾಮಿ ಜಿತಕಾಮಾನಂದಜಿ, ಕೇಂ ದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಸಚಿವರಾದ ಜಮೀರ್‌ಅಹ್ಮದ್, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಳರ್‌ ಮುಂತಾದವರು ಭಾಗವಹಿಸಲಿದ್ದಾರೆ.

Declaration in favor of DK in front of K.C.Venugopal at Mangalore airport terminal