ಬೆಂಗಳೂರು : ಮಹಿಳಾ ಉದ್ಯಮಿದಾರರು ತಾವು ತಯಾರಿಸಿದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ಒದಗಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಜ.09 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ನ್ನು ಬಿಡುಗಡೆ ಮಾಡಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ : JEE Main Result ಫಲಿತಾಂಶ ಫೆಬ್ರವರಿ 16 ರಂದು ಪ್ರಕಟ
ಇದನ್ನು ಮಿಸ್ ಮಾಡದೇ ಓದಿ : ಬ್ಯಾಂಕ್‌ಗಳು, ಬಸ್‌ಗಳು, ಶಿಕ್ಷಣ ಸಂಸ್ಥೆಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ
ಮಹಿಳಾ ಉದ್ಯಮಿಗಳ ನೊಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಗುಂಪಿನ ಸದಸ್ಯರು, ಎನ್.ಆರ್ ಎಲ್.ಎಂ ಫಲಾನುಭವಿಗಳು ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸ್ಮಾಲ್ ಸ್ಕೆಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕಾಸಿಯಾ) ಘಟಕಗಳ ಮಹಿಳಾ ಉದ್ಯಮಿಗಳು, ರುಡ್ ಸೆಟ್-ಆರ್. ಎಸ್, ಇಟಿಐ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ನಡೆಸುತ್ತಿರುವ ಮಹಿಳೆಯರು ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿ ನೀಡಲು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ದೂ.ಸಂ.: 08182-295514 ಕ್ಕೆ ಸಂಪರ್ಕಿಸಬಹುದಾಗಿದೆ.

ನೃತ್ಯ ಚಲನೆಯ ಚಿಕಿತ್ಸಾ ಶಿಬಿರದ ಸಮಾರೋಪ ಸಮಾರಂಭ : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸರ್ಕಾರಿ ಬಾಲಕಿಯರ ಬಾಲಮಂದಿರ, ಬಾಲನ್ಯಾಯ ಮಂಡಳಿ ಚಿತ್ಕಲಾ ನೃತ್ಯ & ಚಲನೆಯ ಚಿಕಿತ್ಸಾ ಘಟಕ-ಶ್ರೀವಿಜಯ ಕಲಾನಿಕೇತನ ಮತ್ತು ಮನೋ ವಿಜ್ಞಾನ ವಿಭಾಗ ಕಟೀಲು ಅಶೋಕ್ ಪೈ ಮೆಮೋರಿಯಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರುವರಿ 13 ರಂದು ಸಂಜೆ 5 ಗಂಟೆಗೆ ಬಾಲ ನ್ಯಾಯ ಮಂಡಳಿ ಆವರಣದಲ್ಲಿ ಸರ್ಕಾರಿ ಬಾಲಕಿಯರ ಬಾಲ ಮಂದಿರದ ಮಕ್ಕಳಿಗಾಗಿ ಕಳೆದ ಮೂರು ತಿಂಗಳುಗಳ ಕಾಲ ನಡೆದ ನೃತ್ಯ ಚಲನೆಯ ಚಿಕಿತ್ಸಾ ಶಿಬಿರದ “ಸಮಾರೋಪ ಸಮಾರಂಭ’ ವನ್ನು ಏರ್ಪಡಿಸಲಾಗಿದೆ.
ಚಿಕಿತ್ಸಾ ಶಿಬಿರದ ನಿರ್ದೇಶಕಿ ಡಾ|| ಕೆ.ಎಸ್.ಪವಿತ್ರ ಅವರ ಮಾರ್ಗದರ್ಶನದಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ನಡೆದ ತರಬೇತಿಯನ್ನು ಬಾಲ ನ್ಯಾಯ ಮಂದಿರದ ಮಕ್ಕಳು ನೃತ್ಯ-ಚಲನೆಯ ಚಿಕಿತ್ಸಾ ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸಲಿದ್ದಾರೆ ಎಂದು ಸರ್ಕಾರಿ ವೀಕ್ಷಣಾಲಯದ ಪರಿವೀಕ್ಷಣಾಧಿಕಾರಿ ಹಾಗೂ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Digital platform facility for products of women entrepreneurs