BREAKING : ಇನ್ಮುಂದೆ ಆಸ್ತಿಗಳಿಗೆ ಅಧಿಕೃತ ಮಾನ್ಯತೆ ನೀಡಲು `ಇ- ಸ್ವತ್ತು’ ವಿತರಣೆ.! | Siddaramaiah

Distribution of `e-Svathu' to give official recognition to properties from now on
Distribution of `e-Svathu' to give official recognition to properties from now on

ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ.

ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಗ್ರಾಮೀಣ ಪ್ರದೇಶದ ಜನರ ಆಸ್ತಿಗಳಿಗೆ ಇ-ಖಾತಾ ವಿತರಿಸುವ ಮೂಲಕ ಅವುಗಳನ್ನು ಸುರಕ್ಷಿತಗೊಳಿಸುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್. ಶಾಸಕ, ರಿಜ್ವಾನ್ ಅರ್ಷದ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸ್ಥಳೀಯವಾಗಿ ಸಂಪನ್ಮೂಲಗಳನ್ನು ಸೃಷ್ಟಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸುವುದರ ಜೊತೆಗೆ, ಗ್ರಾಮೀಣರ ಜೀವನಮಟ್ಟ ಸುಧಾರಿಸುವಂತೆ ಗಮನಾರ್ಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡಲಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ: ನಿಮ್ಮ ಮನೆಯಲ್ಲಿ `ಗ್ಯಾಸ್ ಸಿಲಿಂಡರ್’ ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡಲು ಜಸ್ಟ್ ಹೀಗೆ ಮಾಡಿ.!

ಇದನ್ನು ಮಿಸ್‌ ಮಾಡದೇ ಓದಿ: ದಾಂಪತ್ಯ ಜೀವನಕ್ಕೆ ರಾಜ್ ನಿಡಿಮೋರು ಜೊತೆಗೆ ಕಾಲಿಟ್ಟ ನಟಿ ಸಮಂತಾ

ಇದೇ ವೇಳೆ, ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿಗಳ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ, ಸೂಕ್ತ ಖಾತಾ ಭದ್ರತೆ ದೊರಕದ ಸ್ವತ್ತುಗಳಿಗೆ ಹೊಸದಾಗಿ ಇ-ಖಾತೆ ನೀಡುವ ಮಹತ್ವಾಕಾಂಕ್ಷಿ ಯೋಜನೆಗೂ ಚಾಲನೆ ನೀಡಲಾಗಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಕುಳಿತು ಇ ಸ್ವತ್ತು ತಂತ್ರಾಂಶದ ಮೂಲಕ ತಮ್ಮ ಆಸ್ತಿಯ ಸ್ಥಿತಿಗತಿಗಳನ್ನು ಪರಿಶೀಲಿಸಬಹುದು ಹಾಗೂ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ಇ-ಖಾತೆ ಪಡೆಯಬಹುದಾಗಿದೆ.

ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ನೆಲೆಸಿರುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ನೀಡಲಾಗಿದೆ. ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನು ಇದರಿಂದಾಗಿ ಗ್ರಾಮ ಪಂಚಾಯತಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಈ ಕಾರಣದಿಂದಾಗಿ ರಾಜ್ಯ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಮತ್ತು 199ಸಿ ಸೇರಿಸಿ ಏ.7ರಂದು ಅಧಿಸೂಚನೆ ಹೊರಡಿಸಿದೆ. ಇದರನ್ವಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕ) ನಿಯಮ-2025ನ್ನು ರೂಪಿಸಿದೆ.

Siddaramaiah
Image credit: https://www.facebook.com/Siddaramaiah.Official

ಹೊಸ ಆಸ್ತಿಗಳ ತೆರಿಗೆ ವ್ಯಾಪ್ತಿಗೆ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳ ಬಗ್ಗೆ ನಿಯಮಗಳಲ್ಲಿ ತಿಳಿಸಲಾಗಿದೆ. ಪಂಚಾಯತಿ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ಅನುಮೋದನೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಉಲ್ಲೇಖಿಸಲಾಗಿದೆ. ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಅಧಿಕಾರಿಗಳ ಜವಾಬ್ದಾರಿ, ಕಾಲಾವಧಿ, ಅಪೀಲು ಹೀಗೆ ಪ್ರತಿಯೊಂದು ವಿಷಯದಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದಂತೆ ವಿವರಿಸಲಾಗಿದೆ.ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, -ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ.

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಾಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

Siddaramaiah
Image credit: https://www.facebook.com/Siddaramaiah.Official

2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ‘ಎಲ್ಲ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಆರಂಭಿಸಲಾಗುವುದು’ ಎಂದು ಘೋಷಿಸಲಾಗಿತ್ತು.

Siddaramaiah
Image credit: https://www.facebook.com/Siddaramaiah.Official

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ವನ್ನು ದಿನಾಂಕ: 07.04.2025 ರಂದು ಅಧಿಸೂಚಿಸಿ ಪ್ರಕರಣ 199(ಬಿ) ಹಾಗೂ ಪ್ರಕರಣ 199(ಸಿ) ಅನ್ನು ಸೇರಿಸಲಾಗಿದೆ. ಪ್ರಕರಣ 199 (ಬಿ) ಸ್ವತ್ತುಗಳಿಗೆ ಖಾತಾ ಅಥವಾ ಪಿಐಡಿ ನೀಡುವ ಕುರಿತಂತೆ ಹಾಗೂ ಪ್ರಕರಣ 199(ಸಿ) ಕಟ್ಟಡ ಮತ್ತು ಪರಿವರ್ತನೆಯಾಗದೇ ಇರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳ ಮೇಲೆ ಉಲ್ಲೇಖಿಸುತ್ತದೆ. ಈ ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ನಿರಸನಗೊಳಿಸಿ ಹೊಸದಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳ ಜಾರಿಯಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲಾಗುವುದು.