ಜಿಲ್ಲಾ ಮಟ್ಟದ ಸಿರಿಧಾನ್ಯಗಳ ತಾಂತ್ರಿಕ ಕಾರ್ಯಗಾರ ಮತ್ತು ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್

District In-charge Minister B.Z. Zameer Ahmed Khan inaugurated the district level technical workshop and exhibition on cereals.
District In-charge Minister B.Z. Zameer Ahmed Khan inaugurated the district level technical workshop and exhibition on cereals.

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ರಾಷ್ಟ್ರೀಯ ಆಹಾರ ಭದ್ರತೆ ಹಾಗೂ ಆತ್ಮ ಯೋಜನೆಯಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ತಾಂತ್ರಿಕ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸಿ, ಚಾಲನೆ ನೀಡಿದರು.

ಬಳಿಕ ಅವರು, ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯಯುತ ಜೀವನಕ್ಕೆ ಸಾಕಷ್ಟು ಪ್ರಯೋಜನೆಗಳಿರುವುದರಿಂದ ಸಿರಿಧಾನ್ಯ ಬೆಳೆ ಬೆಳೆಯುವ ಕ್ರಮ ಹಾಗೂ ಇತರೆ ಮಾಹಿತಿ ಕುರಿತಂತೆ ಆಯೋಜಿಸಿದ ತಾಂತ್ರಿಕ ಕಾರ್ಯಾಗಾರದಲ್ಲಿ ರೈತರು ಮಾಹಿತಿ ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

District In-charge Minister B.Z. Zameer Ahmed Khan inaugurated the district level technical workshop and exhibition on cereals.
District In-charge Minister B.Z. Zameer Ahmed Khan inaugurated the district level technical workshop and exhibition on cereals.

ಬಳಿಕ ಕಾರ್ಯಾಗಾರದಲ್ಲಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಗಾಳಿ, ನೀರು ಮತ್ತು ಆಹಾರ ಸೇರಿದಂತೆ ಎಲ್ಲವೂ ಕಲುಷಿತಗೊಳ್ಳುತ್ತಿವೆ. ಈ ಮಾಲಿನ್ಯದ ಪರಿಣಾಮವಾಗಿ ಹೃದಯಾಘಾತ, ರಕ್ತದೊತ್ತಡ ಹಾಗೂ ಮಧುಮೇಹದಂತಹ ಕಾಯಿಲೆಗಳು ಹೆಚ್ಚುತ್ತಿವೆ. ನಾವು ಸೇವಿಸುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಂಡರೆ ಮಾತ್ರ ಆರೋಗ್ಯವಂತ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.

ಕೃಷಿ ಇಲಾಖೆಯು ರೈತರು ಮತ್ತು ಸಾರ್ವಜನಿಕರಲ್ಲಿ ಆಹಾರದ ಗುಣಮಟ್ಟದ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು. ವಿಶೇಷವಾಗಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಆಹಾರ ಜಾಗೃತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಬೇಕು. ಯುವ ಪೀಳಿಗೆಯಲ್ಲಿ ಅರಿವು ಮೂಡಿದಾಗ ಮಾತ್ರ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

District In-charge Minister B.Z. Zameer Ahmed Khan inaugurated the district level technical workshop and exhibition on cereals.
District In-charge Minister B.Z. Zameer Ahmed Khan inaugurated the district level technical workshop and exhibition on cereals.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ ಚಿದಾನಂದಪ್ಪ ಅವರು ಮಾತನಾಡಿ, ಸಾವಯವ ಪದ್ಧತಿಯಲ್ಲಿ ಬೆಳೆದ ಆಹಾರ ಪದಾರ್ಥಗಳ ಸೇವನೆಗೆ ಮುಂದಾಗಬೇಕು. ಹಿಂದೆ ಬಡವರ ಆಹಾರವೆಂದು ಪರಿಗಣಿಸಲಾಗಿದ್ದ ರಾಗಿ, ಸಜ್ಜೆ, ಜೋಳದಂತಹ ಸಿರಿಧಾನ್ಯಗಳಿಗೆ ಇಂದು ಹೆಚ್ಚಿನ ಬೇಡಿಕೆ ಬಂದಿದೆ. ಸಿರಿಧಾನ್ಯಗಳ ಬಳಕೆ ಹೆಚ್ಚುವುದರಿಂದ ರೈತರ ಬದುಕು ಹಸನಾಗುವುದಲ್ಲದೆ, ಜನರ ಆರೋಗ್ಯವೂ ಸುಧಾರಿಸುತ್ತದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನಿಗಳು ವಿಶೇಷ ಉಪನ್ಯಾಸ ನೀಡಿದರು.

ಗಮನ ಸೆಳೆದ ಉತ್ಪನ್ನ, ವಿವಿಧ ಪರಿಕರ ಮಳಿಗೆಗಳು: ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026ರ ಅಂಗವಾಗಿ ಮುನಿಸಿಪಲ್ ಕಾಲೇಜ್ ಮೈದಾನದ ಆವರಣದಲ್ಲಿ ಸಿರಿಧಾನ್ಯಗಳಿಂದ ತಯಾರಿಸಿದ ಉತ್ಪನ್ನಗಳ ಮಳಿಗೆ, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ವಿವಿಧ ಕೃಷಿ ಪರಿಕರಗಳ ಮಳಿಗೆಗಳು ಸೇರಿದಂತೆ ಒಟ್ಟು ವಿವಿಧ ಮಳಿಗೆಗಳು ಹಾಕಲಾಗಿತ್ತು.

ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ್, ತಾಲೂಕು ಕೃಷಿ ಅಧಿಕಾರಿ ದಯಾನಂದ ಸೇರಿದಂತೆ ಕೃಷಿ ವಿಜ್ಞಾನಿಗಳು, ಕೃಷಿ ಅಧಿಕಾರಿಗಳು, ರೈತ ಮುಖಂಡರು, ರೈತರು ಪಾಲ್ಗೊಂಡಿದ್ದರು.

District In-charge Minister B.Z. Zameer Ahmed Khan inaugurated the district level technical workshop and exhibition on cereals.