ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Applications invited for 5 major projects of Women's Development Corporation
Applications invited for 5 major projects of Women's Development Corporation

ಬೆಂಗಳೂರು: ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಲ್ಲಿ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಾದ ಉದ್ಯೋಗಿನಿ, ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ ಇವುಗಳ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿಗಳನ್ನು ಪಡೆಯಲು 2025ನೇ ಡಿಸೆಂಬರ್ 15ರ ವರೆಗೆ ನಿಗದಿಪಡಿಸಿರುವ ಅವದಿಯನ್ನು ಪರಿಷ್ಕರಿಸಿ 2026ನೇ ಜನವರಿ 15ರ ವರಗೆ ವಿಸ್ತರಿಲಾಗಿದೆ.

ಅರ್ಹ ಅಸಕ್ತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗಿನಿ ಯೋಜನೆ:- ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕಿನಿಂದ 3 ಲಕ್ಷ ದವರೆಗೆ ಸಾಲ ಮತ್ತು ನಿಗಮದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ. 50% ರಷ್ಟು ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ ಶೇ. 30% ರಷ್ಟು ಸಹಾಯಧನ ನೀಡಲಾಗುವುದು. ವಯೋಮಿತಿ 18 ರಿಂದ 55 ವರ್ಷ.

ಚೇತನ ಯೋಜನೆ:- ಧಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 30,000 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು. ಫಲಾನುಭವಿಯು ಸಮುದಾಯ ಆಧಾರಿತ ಸಂಸ್ಥೆಯಲ್ಲಿ ನೊಂದಣಿಯಾಗಿರಬೇಕು.

Applications invited for 5 major projects of Women's Development Corporation
Applications invited for 5 major projects of Women’s Development Corporation

ಧನಶ್ರೀ ಯೋಜನೆ:- ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000 ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 60 ವರ್ಷಗಳು. ಫಲಾನುಭವಿಯು ಎ.ಆರ್.ಟಿ ಕೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ನೋಂದಣಿಯಾಗಿರಬೇಕು.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:- ಆದಾಯ ಉತ್ಪನ್ನ ಕೈಗೊಳ್ಳಲು ರೂ. 30,000 ಪ್ರೋತ್ಸಾಹಧನ ನೀಡಲಾಗುತ್ತದೆ. ಫಲಾನುಭವಿಯು ಸಮುದಾಯ ಆಧಾರಿತ ಸಂಸ್ಥೆಯಲ್ಲಿ ನೋಂದಣಿಯಾಗಿರಬೇಕು.

ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು, ಅರ್ಜಿದಾರರು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಯೋಜನಾವರದಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಯಸ್ಸಿನ ದೃಢೀಕರಣ ಪತ್ರ, ವಾಸದೃಢೀಕರಣ ಪತ್ರ, ಬ್ಯಾಂಕ್ ಪಾಸ್‌ಪುಸ್ತಕ, ವಿಧವೆ/ಅಂಗವಿಕಲರಾಗಿದ್ದಲ್ಲಿ ದೃಢೀಕರಣ ಪತ್ರ ಸಲ್ಲಿಸಬೇಕು.

ಉದ್ಯೋಗಿನಿ ಯೋಜನೆಯಡಿ ಎಸ್‌ಸಿಪಿ/ಟಿಎಸ್‌ಪಿ ಬಳಕೆಯಾಗದ (ಅನ್ಸ್ಪೆಂಟ್) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಸಹಾ ಸೇವಾ ಸಿಂಧು ಪೋರ್ಟಲ್‌ನಲ್ಲೆ ಅರ್ಜಿ ಸಲ್ಲಿಸುವುದು.

ಅರ್ಜಿದಾರರು, ಈ ಎಲ್ಲಾ ಯೋಜನೆಗಳಡಿ ಅರ್ಜಿಯನ್ನು, ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು https://sevasindhu.karnataka.gov.in ಮೂಲಕ ಡಿ. 15ರ ಸಂಜೆ 5.30ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Extension of application submission period for various schemes of Karnataka State Women’s Development Corporation