Hubballi: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು..!

Hubballi Five persons were killed on the spot when a lorry in which they were travelling collided head-on with a lorry.

ಹುಬ್ಬಳ್ಳಿ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿರುವವರು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ತೆಗೆದುಕೊಂಡಿದ್ದಾರೆ ಆಂತ ತಿಳಿದು ಬಂದಿದೆ.

kannadanadulogo
kannadanadulogo

ಘಟನೆ ಸಂಬಂಧ ಲಾರಿ ಡ್ರೈವರ್‌ ಜಾಗದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಇದಲ್ಲದೇ ಮೃತರು ಹುಬ್ಬಳ್ಳಿಯಿಂದ ಸಾಗರದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

Hubballi Five persons were killed on the spot when a lorry in which they were travelling collided head-on with a lorry.