ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ- ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ

Madhubangarappa

ಬೆಂಗಳೂರು : 2025-26ನೇ ಸಾಲಿನ ರಾಜ್ಯ ವಲಯ ಮುಂದುವರೆದ ಯೋಜನೆಯಡಿ ಸರ್ಕಾರಿ ಶಾಲಾ ಶೌಚಾಲಯ ನಿರ್ಮಾಣಕ್ಕಾಗ ರೂ.9000.00 ಲಕ್ಷಗಳ ಅನುದಾನ ನಿಗದಿಯಾಗಿದ್ದು, ರೂ. 6328 ಲಕ್ಷಗಳ ಅನುದಾನದಲ್ಲಿ ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಇಂದು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಕುಂದಗೋಳ ವಿಧಾನಸಭೆಯ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕುಂದಗೋಳ ಕ್ಷೇತ್ರದ 2 ಸರ್ಕಾರಿ ಶಾಲೆಗಳಿಗೆ ರೂ. 8.00ಲಕ್ಷಗಳ ಅನುದಾನದಲ್ಲಿ ಶೌಚಾಲಯಕ್ಕೆ ಮಂಜೂರು ಮಾಡಲಾಗಿದೆ. ಬಾಕಿ ರೂ. 2671.00ಲಕ್ಷಗಳ ಅನುದಾನದಲ್ಲಿ ಅಗತ್ಯತೆ ಮತ್ತು ಆದ್ಯತೆಯನುಸಾರ ಶೌಚಾಲಯ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ ಎಂದರು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಯಾವುದೇ ಖಾಸಗಿ ವಾಹನಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತಿಲ್ಲ

ಸಮಗ್ರ ಶಿಕ್ಷಣ-ಕರ್ನಾಟಕ ಯೋಜನೆಯಡಿ 2025-26ನೇ ಸಾಲಿನಲ್ಲಿ ಶಾಲಾ ಶೌಚಾಲಯ ನಿರ್ಮಾಣಕ್ಕಾಗಿ ರೂ. 1272.00 ಲಕ್ಷಗಳ ಅನುದಾನ ನಿಗದಿಯಾಗಿದ್ದು, ಅಗತ್ಯತೆ ಮತ್ತು ಆದ್ಯತೆಯನುಸಾರ ಕ್ರಿಯಾ ಯೋಜನೆ ಸಿದ್ದಪಡಿಸಿದ್ದು ಅನುಮೋದನೆಗೊಳ್ಳುವ ಪ್ರಕ್ರಿಯೆಯಲ್ಲಿದೆ ಎಂದು ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಆದ್ಯತೆ ಮೇರೆಗೆ ವೈದ್ಯರುಗಳು ಹಾಗೂ ಇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಅಗತ್ಯ ಕ್ರಮ- ಸಚಿವ ದಿನೇಶ್ ಗುಂಡೂರಾವ್

ಸಕಲೇಶಪುರ ವಿಧಾನಸಭಾ ಕ್ಷೇತ್ರದ ಸದಸ್ಯ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಕಲೇಶಪುರದಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಹಾಸನ ಇವರಿಂದ ಪ್ರಸ್ತಾವನೆ ಸ್ವೀಕರಿಸಲಾಗಿದೆ. ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪ್ರಾರಂಭಿಸಲು ಶೇಕಡ 70 ಕ್ಕಿಂತ ಹೆಚ್ಚು ಹಾಸಿಗೆಗಳು ಹೆರಿಗೆ ಪ್ರಕರಣಗಳಿಂದ ಭರ್ತಿಯಾಗಿರಬೇಕು. ಇದನ್ನು ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದರು.