`ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 3600 `ಕಾನ್ ಸ್ಟೇಬಲ್’ ಹುದ್ದೆಗಳ ಶೀಘ್ರ ನೇಮಕಾತಿ.!

Dr. G. Parameshwar
Dr. G. Parameshwar

ಬೆಳಗಾವಿ : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಡಿ.ಟಿ. ಶ್ರೀನಿ ವಾಸ್, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಜಿ.ಪರಮೇಶ್ವರ್, , ಪೊಲೀಸ್ ಇಲಾಖೆಯಿಂದ 3,600 ಕಾನ್ಸ್ಟೇಬಲ್ ನೇಮಕಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿದೆ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಂಡು ಬರುತ್ತಿದೆ. ಸುಮಾರು 900 ಎಎಸ್ ಐ ನೇಮಕಾತಿ ಮಾಡಿದ್ದು, 10 ತಿಂಗಳ ತರಬೇತಿ ಪಡೆಯುತ್ತಿದ್ದಾರೆ. ಪೂರ್ಣಗೊಂಡ ನಂತರ ಹುದ್ದೆ ನೀಡಲಾಗುವುದು ಎಂದರು.

G. Parameshwara
G. Parameshwara

ರಾಜ್ಯ ಸರ್ಕಾರದ ಬೇರೆ ಬೇರೆ ಇಲಾಖೆಯಲ್ಲಿ ನೇಮಕಾತಿ ಮತ್ತು ಮುಂಬಡ್ತಿ ಹುದ್ದೆಗಳು 50:50 ಅನುಪಾತದಲ್ಲಿದೆ, ಆದರೆ ಪೊಲೀಸ್ ಇಲಾಖೆಯಲ್ಲಿ 70:30 ಅನುಪಾತದಲ್ಲಿದೆ. ಯುವಕರು ಬರಬೇಕು ಎಂದು ಶೇ.70 ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ – ಸಚಿವ ರಾಮಲಿಂಗಾರಡ್ಡಿ

ಬೆಳಗಾವಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ramalinga reddy
ramalinga reddy

ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಟಿ.ಡಿ ಇವರು ಸಾಂಬಾರು ಪದಾರ್ಥಗಳ ರಫ್ತು ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸೂಕ್ತವಾದ ಮೂಲ ಸೌಕರ್ಯಕ್ಕೆ ಸ್ಪೈಸ್ ಪಾರ್ಕ್ ಅಗತ್ಯವಾಗಿದ್ದು, ಆದಷ್ಟು ಬೇಗ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಬೇಕೆಂದು ವಿಧಾನಸಭೆಯಲ್ಲಿ ಮನವಿ ಮಾಡಿದ ಸಮಯದಲ್ಲಿ ಉತ್ತರಿಸಿದ ಸಚಿವರು, ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲು ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಹೋಬಳಿ ಬೆಟ್ಟದಮನೆ ಗ್ರಾಮದಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ ಉದ್ದೇಶಕ್ಕಾಗಿ ತೋಟಗಾರಿಕೆ ಇಲಾಖೆಗೆ ಭೂಮಿ ವರ್ಗಾಯಿಸಿ, ದಿನಾಂಕ 30-5-2025ರಂದು ಆದೇಶ ಹೊರಡಿಸಲಾಗಿದೆ. ಜಮೀನಿನ ಹದ್ದುಬಸ್ತು ಗುರುತಿಸುವಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಪ್ರಸ್ತುತ ವ್ಯವಹರಣಾ ಸಮಾಲೋಚಕರನ್ನು ನೇಮಿಸಿ ವರದಿಯನ್ನು ಸಿದ್ದಪಡಿಸಲು ಸೂಚಿಸಲಾಗಿರುತ್ತದೆ. ವರದಿ ಬಂದ ಕೂಡಲೇ ಆದಷ್ಟು ಶೀಘ್ರವಾಗಿ ಸ್ಪೈಸ್ ಪಾರ್ಕ್ ಕಾರ್ಯಾರಂಭಗೊಳಿಸಲಾಗುವುದು ಎಂದು ತಿಳಿಸಿದರು.

Good news for ‘police post’ aspirants: 3600 ‘constable’ posts to be filled soon in the state