ಬೆಳಗಾವಿ: ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ ಹದಿನೈದು (15) ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ್ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ ಸೆಪ್ಟೆಂಬರ್ 12ರಂದು ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದರು.
ಪರಿಷತ್ತಿನಲ್ಲಿಂದು ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ದಿನಾಂಕ:04-12-2025ರ ಅಂತ್ಯಕ್ಕೆ ಒಟ್ಟು 18,552 ಹದಿನೈದು (15) ವರ್ಷಗಳು ಮೀರಿದ (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ್ ಪೆÇರ್ಟಲಿನಲ್ಲಿ ರದ್ದುಪಡಿಸಲಾಗಿದೆ. ಈ 18,552 ವಾಹನಗಳ ಪೈಕಿ ಆರ್ ವಿಎಸ್ ಎಫ್ (ರಿಜಿಸ್ಟರ್ಡ್ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿ) ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು.

2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3212 ವಾಹನಗಳು ನಿಷ್ಕ್ರಿಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರಿಯಗೊಳಿಸಲು ಬಾಕಿ ಇದೆ ಎಂದು ಸಚಿವರು ಮಾಹಿತಿ ನೀಡಿದರು.
ನೋಂದಣಿಗೆ ಆರ್ಟಿಓಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿದರೆ ನಿರ್ಧಾಕ್ಷಿಣ್ಯ ಕ್ರಮ : ಸಚಿವ ರಾಮಲಿಂಗಾರೆಡ್ಡಿ ರಾಜ್ಯದ ಯಾವುದೇ ಆರ್ಟಿಓ ಕಛೇರಿಗಳಲ್ಲಿ ಐμÁರಾಮಿ ಕಾರುಗಳ ನೋಂದಣಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ವಾಹನದ ಮೌಲ್ಯವನ್ನು ಮರೆಮಾಚಿ ರಿಜಿಸ್ಟ್ರೇಷನ್ ಮಾಡಿರುವುದು, ಮಾಡುವುದು ಸರ್ಕಾರದ ಗಮನಕ್ಕೆ ಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.

ವಿಧಾನ ಪರಿಷತ್ತಿನಲ್ಲಿಂದು ಸದಸ್ಯರಾದ ಶರವಣ ಟಿ ಎ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆಗೆ ಪ್ರತಿಕ್ರಿಯಿಸಿದ ಸಚಿವರು, ಮಂಗಳೂರು ಮತ್ತು ಉಡುಪಿ ಆರ್.ಟಿ.ಒ ಕಛೇರಿಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಕಾರಿನ ನಿಜವಾದ ಮೌಲ್ಯವನ್ನು ಮರೆ ಮಾಚಿ, ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಛೇರಿಯ ಕೇಂದ್ರ ಸ್ಥಾನೀಯ ಸಹಾಯಕರು, ಅಧೀಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕರು ಹಾಗೂ ಉಡುಪಿ ಕಛೇರಿಯ ಅಧೀಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಸಂಬಂಧ ಇಲಾಖಾ ವಿಚಾರಣೆ ಜಾರಿಯಲ್ಲಿರುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೆÇಲೀಸರ ಪ್ರಸ್ತಾವನೆಯ ಮೇರೆಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರುದ್ಧ ವಿಚಾರಣೆ, ತನಿಖೆ ಕೈಗೊಳ್ಳಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 17(ಎ) ಅನ್ವಯ ಪೂರ್ವಾನುಮತಿಯನ್ನು ಸಹ ನೀಡಲಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
Government approves scrapping of vehicles over 15 years old: Minister Ramalinga Reddy