ಬೆಳಗಾವಿ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ 1.25 ಲಕ್ಷ ಸಹಾಯಧನವು ಯಾವುದಕ್ಕೂ ಸಾಕಾಗುತ್ತಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಲೇ ಇವೆ. ಇದು ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಟ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ವಿಧಾನ ಪರಿಷತ್ತನಲ್ಲಿಂದು ಸದಸ್ಯರಾದ ಪ್ರದೀಪ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವಣೆಯು ಪರಿಶೀಲನೆಯಲ್ಲಿರುತ್ತದೆ.
ಈ ಸಹಾಯಧನ ಹೆಚ್ಚಳ ಸಂಬಂದ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದರು.

ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಲು ಬಾಕಿ ಇರುವುದಿಲ್ಲ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಅಕ್ಟೋಬರ್-2025ರ ಅಂತ್ಯಕ್ಕೆ 1324.26 ರೂ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು
ರಾಜ್ಯದಲ್ಲಿ 37,48,700 ವಸತಿ ರಹಿತರು ಇದ್ದಾರೆ ಎಂದು ವಸತಿ, ವಖ್ಫ್ ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಸಚಿವ ಬಿ. ಜಡ್. ಜಮೀರ್ ಅಹಮದ್ ಖಾನ್ ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಶಿವಕುಮಾರ್.ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2018ರಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆ ಹಾಗೂ 2017ರಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ ನಗರ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಯಲ್ಲಿ ರಾಜ್ಯದಲ್ಲಿ ಒಟ್ಟು 37,48,766 ವಸತಿ ರಹಿತರು ಕಂಡು ಬಂದಿದ್ದು,ಇದರಲ್ಲಿ 17,31,633 ನಿವೇಶನ ರಹಿತರು ಮತ್ತು 20,17,133 ವಸತಿ ರಹಿತರು ಇದ್ದಾರೆ ಎಂದರು.
2024-2025ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಒಟ್ಟು 7,38,881 ಮನೆಗಳ ಗುರಿ ನೀಡಿದ್ದು, ಇವುಗಳಲ್ಲಿ 3,27,747 ಅನುಮೋದನೆಗೊಂಡಿರುತ್ತವೆ. 411134 ಮನಗಳು ಅನುಮೋದನೆಗೆ ಬಾಕಿಯಿವೆ ಎಂದರು.
ರಾಜ್ಯ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ಪರಿಶಿಷ್ಟ ಜಾತಿ, ಪಂಗಡದವರಿಗೆ ರೂ. 4 ಲಕ್ಷ ಮತ್ತು ಸಾಮಾನ್ಯ ವರ್ಗದವರಿಗೆ ರೂ. 3.5 ಲಕ್ಷ ಕ್ಕೆ ಹೆಚ್ಚಳ ಮಾಡುವ ಚಿಂತೆನೆ ಇದೆ ಎಂದು ತಿಳಿಸಿದ
Government considering increasing Basava Housing Scheme subsidy: Zameer Ahmed Khan












Follow Me