ಬೆಂಗಳೂರು : ಗೃಹಲಕ್ಷ್ಮಿ ಡಿಜಿಟಲ್ ಮಾರುಕಟ್ಟೆ ಆಪ್‌ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜ.9 ರಿಂದ ಗೃಹಲಕ್ಷ್ಮಿ ಡಿಜಿಟಲ್ ಮಾರುಕಟ್ಟೆ ಆಪ್ ಬಿಡುಗಡೆ ಮಾಡಲಾಗಿದೆ.
ಇದರಲ್ಲಿ ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಸ್ವ-ಸಹಾಯ ಗುಂಪಿನ ಸದಸ್ಯರು, ಎನ್‌ಆರ್‌ಎಲ್‌ಎಂ ಫಲಾನುಭವಿಗಳು ಮತ್ತು ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕಾಸಿಯಾ ಘಟಕಗಳ ಮಹಿಳಾ ಉದ್ಯಮಿಗಳು, ಧರ್ಮಸ್ಥಳ ಸಂಸ್ಥೆ ಮೂಲಕ ತರಬೇತಿ ಪಡೆದು ಸ್ವ-ಉದ್ಯೋಗ ನಡೆಸುತ್ತಿರುವ ಮಹಿಳೆಯರು, ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ಈ ಸೌಲಭ್ಯ ಪಡೆಯಬಹುದು.
ಆಸಕ್ತ ಮಹಿಳೆಯರು ತಾವು ತಯಾರಿಸುವ ಉತ್ಪನಗಳ ಮಾಹಿತಿಯನ್ನು ಜಿಲ್ಲೆಯ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಮ್.ಸಿ.ಸಿ ‘ಬಿ’ ಬ್ಲಾಕ್, ಕುವೆಂಪು ನಗರ, ದಾವಣಗೆರೆ ಇಲ್ಲಿ ಮಹಿಳಾ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಿ ನೀಡಬೇಕೆಂದು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಉಚಿತ ತರಬೇತಿ ಶಿಬಿರ : ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಾಗಲಕೋಟ ಇವರ ವತಿಯಿಂದ ಫೆಬ್ರವರೊ-2026ರ ಮಾಹೆಯಲ್ಲಿ ಉಚಿತವಾಗಿ ಆಡು ಮತ್ತು ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಹಣ್ಣು ಬೆಳೆಗಳ ಕೃಷಿ, ಸಾವಯವ ಕೃಷಿ, ಸಮಗ್ರ ಕೃಷಿ, ಅಣಬೆ ಕೃಷಿ, ಜೇನು ಕೃಷಿ, ರೇಷ್ಮೆ ಕೃಷಿ ಮತ್ತು ಪುಷ್ಪ-ತರಕಾರಿ ಬೆಳೆಗಳ ಕೃಷಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ 18 ರಿಂದ 55 ವರ್ಷದೊಳಗಿನ ಸ್ವಸಹಾಯ ಸಂಘದ ಸದಸ್ಯರು, ಯುವಕರು, ಮಹಿಳೆಯರು ಭಾಗವಹಿಸಬಹುದು.
ತರಬೇತಿಯು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಯುನಿಟ್-2, ಸೆಕ್ಟರ್ ನಂ-96, ಅಡ್ಡರಸ್ತೆ 3, ಪಬ್ಲಿಕ್ ಗಾರ್ಡನ್ ಹತ್ತಿರ, ದುರ್ಗಾನಗರ, ನವನಗರ-ಬಾಗಲಕೋಟೆ -587103 ಮೊ.ಸಂ: 9482630790 ಇಲ್ಲಿಗೆ ಕರೆ ಮಾಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆAದು ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
Grilahakshmi Digital Market App