gruhalakshmi scheme : ಶೀಘ್ರದಲ್ಲಿ ಬಾಕಿ ಇರುವ ಗೃಹಲಕ್ಷ್ಮಿ ಹಣ : ಯಜಮಾನಿ’ಯರಿಗೆ ಸಿಹಿ ಸುದ್ದಿಕೊಟ್ಟ ರಾಜ್ಯ ಸರ್ಕಾರ

gruhalakshmi yojana
gruhalakshmi yojana

ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದ ಗೃಹಲಕ್ಷ್ಮೀ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಮಿಸ್ ಮಾಡದೇ ಓದಿ: ಐಪಿಎಲ್ 2026 ಪ್ರತಿ ತಂಡದ ಪೂರ್ಣ ಆಟಗಾರರ ಪಟ್ಟಿ ಹೀಗಿದೆ

ಇದನ್ನು ಮಿಸ್ ಮಾಡದೇ ಓದಿ: ರಾಜ್ಯದಲ್ಲಿ ಈವರೆಗೆ 23 ಕಂತು ಗೃಹಲಕ್ಷ್ಮೀ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ ಬರುತ್ತಿಲ್ಲ. ಫೆಬ್ರವರಿ, ಮಾರ್ಚ್ ತಿಂಗಳ ಹಣ ಇನ್ನೂ ಸಂದಾಯವಾಗಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

gruhalakshmi yojana
gruhalakshmi yojana

ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು, ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ ಎಂದು ದಾಖಲೆಗಳ ಸಮೇತ ಆರೋಪಿಸಿದ್ದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಈ ನಡುವೆ ಈ ಬಗ್ಗೆ ಸದನದಲ್ಲಿ ಕಾವೇರಿದ ಸನ್ನಿವೇಶ ಕಂಡು ಬಂದಿತ್ತು, ಕೂಡಲೇ ಸ್ಪೀಕರ್‌ ಅವರು ಸದನವನ್ನು ಕೆಲವು ನಿಮಿಶಗಳ ಕಾಲ ಸದನವನ್ನು ಮುಂದೂಡಿದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನಕ್ಕೆ ಆಗಮಿಸಿ ಮಾಹಿತಿ ನೀಡಿದರು. ಸದನದಲ್ಲಿ ಸಚಿವೆ ಈ ಹಿಂದಿನ ಉತ್ತರಕ್ಕೆ ತೀವ್ರ ಆಕ್ರೋಶ ಕೇಳಿ ಬಂದಿದೆ. ಸಚಿವೆ ವಿರುದ್ದ ವಿಪಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸರ್ಕಾರ ದಿವಾದಳಿಯಾಗಿದ್ದು, ಜನತೆಗೆ ಗ್ಯಾರಂಟಿ ಹೆಸರಿನಲ್ಲಿ ಮೋಸ ಮಾಡುತ್ತಿದೆ ಅಂತ ಹೇಳುತ್ತಿದ್ದಾವೆ. ಅಧಿಕಾರಿಗಳ ವಿರುದ್ದ ಕೂಡ ವಿಪ ಶಾಸಕರುಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸರ್ಕಾರದ ವಿರುದ್ದ ಟೀಕೆ ಮಾಡುತ್ತಿದ್ದಾವೆ.

The pending gruhalakshmi  money will be available soon: The state government has given good news.