Gym fitness | ಪರಿಶಿಷ್ಟ ಜಾತಿಯ ಯುವಕರಿಗೆ ಜಿಮ್ ಫಿಟ್ನೆಸ್ ತರಬೇತಿ ಶಿಬಿರ

puc board karnataka

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವಕರಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಫಿಟ್ನೆಸ್ ತರಬೇತಿ ಶಿಬಿರವನ್ನು 2015 ರ ಡಿಸೆಂಬರ್ 15 ರಿಂದ 2026 ರ ಜನವರಿ 28 ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ.

ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ, ಊಟೋಪಹಾರ ನುರಿತ ತರಬೇತುದಾರರಿಂದ ತರಬೇತಿ ಹಾಗೂ ಕ್ರೀಡಾಗಂಟು ಅನ್ನು ಇಲಾಖೆ ವತಿಯಿಂದ ನೀಡಲಾಗುವುದು.

ತರಬೇತಿ ಶಿಬಿರದಲ್ಲಿ ದ್ವಿತೀಯ ಪಿ.ಯು.ಸಿ. (ಪಾಸ್/ಫೇಲ್) ಹೊಂದಿದ 18 ವರ್ಷದಿಂದ 35 ವರ್ಷದೊಳಗಿನ ಯುವಕರು ಭಾಗವಹಿಸಬಹುದು.

Application invited for laptop
Application i

ಆಸಕ್ತರು ಡಿಸೆಂಬರ್ 11 ರೊಳಗಾಗಿ ತಮ್ಮ ಇತ್ತೀಚಿನ ಭಾವಚಿತ್ರ, ಆಧಾರ್, ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಜನ್ಮ ದಿನಾಂಕದ ದಾಖಲೆಗಳೊಂದಿಗೆ ಉಪ ನಿರ್ದೇಶಕರು, (ಎಸ್.ಸಿ.ಎಸ್.ಪಿ-ಟಿ.ಎಸ್.ಪಿ) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

Application invited for laptop
Application i

ಹೆಚ್ಚಿನ ವಿವರಗಳಿಗಾಗಿ ಕಛೇರಿ ವೇಳೆ ಬೆಳಿಗ್ಗೆ 10.00 ರಿಂದ ಸಂಜೆ 5:30 ರವರೆಗೆ ಸಹಾಯವಾಣಿ ಸಂಖ್ಯೆ 155265 ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gym fitness training camp for Scheduled Caste youth