Karnataka Public Service Commission : ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ ಮತ್ತು ಮೋಟಾರು ವಾಹನ ನಿರೀಕ್ಷಕರ ಹುದ್ದೆ ಬಗ್ಗೆ ಇಲ್ಲಿದೆ ಮಾಹಿತಿ

Karnataka Public Service Commission

ಬೆಂಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಕೆಜಿಬಿವಿ, ಕೆಕೆಜಿಬಿವಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ವಸತಿ ಶಾಲೆ / ನಿಲಯಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ದಾಖಲಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿ (Applications invited)ದೆ.

ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು 2025 ಮೇ 02 ರಿಂದ 20 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಿಗದಿಪಡಿಸಿದ್ದು, ಪ್ರವೇಶಾತಿ ಬಯಸುವ ತರಗತಿಗಳಿಗೆ ಆಯಾ ವಸತಿ ಶಾಲೆಗಳಲ್ಲಿ (Residential School) ಆಪ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

vidyavahini.karnataka.gov.in

ಆಸಕ್ತ ವಿದ್ಯಾರ್ಥಿಗಳು ಸಮಗ್ರ ಶಿಕ್ಷಣ(education) ಕರ್ನಾಟಕದ (Karnataka) ವಿದ್ಯಾವಾಹಿನಿ ತಂತ್ರಾಂಶದ ಆನ್‍ಲೈನ್ ಲಿಂಕ್ https://vidyavahini.karnataka.gov.in ಅಥವಾ ಆಪ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ಕೂರ್ಮಾ ರಾವ್ ಮಿಟ್ಟಿರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಕಡ್ಡಾಯ Kannada ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರ ಲಭ್ಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2024 ನೇ ಮಾರ್ಚ್ 14 ರಂದು ಅಧಿಸೂಚಿಸಲಾದ ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ‘ಸಿ’ ವೃಂದದ ಮೋಟಾರು ವಾಹನ (Motor Vehicle) ನಿರೀಕ್ಷಕರು – 70 ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ 2025ನೇ ಮೇ 13 ರಂದು ಕಡ್ಡಾಯ ಕನ್ನಡ (Kannada) ಭಾಷಾ ಪರೀಕ್ಷೆ ಮತ್ತು ಮೇ 14 ರಂದು ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Karnataka Public Service Commission

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲ http://kpsc.kar.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಸದರಿ ಪರೀಕ್ಷೆಯ ವೇಳಾಪಟ್ಟಿಯು (Schedule) ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.