ರಾಮನಗರ: ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಶಿವನಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ 6ನೇ ತರಗತಿ ದಾಖಲಾತಿಗೆ ಡಿ.13ರ ಶನಿವಾರ ಜಿಲ್ಲೆಯ 8 ನಿಗದಿತ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯುತ್ತದೆ.
ಪರೀಕ್ಷಾ ಕೇಂದ್ರದ ವಿವರ: ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಕನಕಪುರ ತಾಲ್ಲೂಕಿನ ಸೇಂಟ್ ಮೈಕಲ್ ಹೈಸ್ಕೂಲ್ ಹಾಗೂ ಸೇಂಟ್ ಥಾಮಸ್ ಹೈಸ್ಕೂಲ್, ಮಾಗಡಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ರಾಮನಗರ ತಾಲ್ಲೂಕಿನ ಭಾರತೀಯ ಸಂಸ್ಕೃತಿ ವಿದ್ಯಾಪೀಠ ಹಾಗೂ ಐಜೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಯಲಿದೆ.


ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಜಿಲ್ಲೆಯ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗುವಂತೆ ಕನಕಪುರದ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವನಿಧಿ ಅಭ್ಯರ್ಥಿಗಳಿಗೆ ವೃತ್ತಿಪರ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಸಹಯೋಗದೊಂದಿಗೆ ಆಯೋಜಿಸಲಾಗಿದ್ದು, ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಯುವನಿಧಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ತರಬೇತಿ ನಂತರ ಪ್ಲೇಸ್‌ಮೆಂಟ್ ಒದಗಿಸಲಾಗುವುದು. ರಾಮನಗರ ಟೌನಿನಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ. ಯುವನಿಧಿ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂ: 9945086219 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Jawahar Navodaya Vidyalaya Class 6 entrance exam on 13th, Applications are invited for Yuvanidi candidates for Vocational Skill Training











Follow Me