ರಾಮನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ 2026ರ ಮಾರ್ಚ್ 05ರ ಗುರುವಾರದಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ರಾಮನಗರದಲ್ಲಿ ಆಯೋಜಿಸಲಾಗಿದೆ, ಇದರಲ್ಲಿ ಭಾಗಿಯಾಗುವ ಪ್ರತಿಷ್ಠಿತ ಕಂಪನಿಗಳು, ಕೈಗಾರಿಕಾ ಸಂಸ್ಥೆಗಳು ಆದ್ಯತೆ ಮೇರೆಗೆ ಜಿಲ್ಲೆಯ ನಿರುದ್ಯೋಗಿ ಯುವಜನರಿಗೆ ಉದ್ಯೋಗಾವಕಾಶವನ್ನು ಒದಗಿಸಿಕೊಡುವಂತೆ ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್ ಅವರು ಕರೆ ನೀಡಿದರು.
ಅವರು ಫೆ.17ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-2026ರ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನು ಮಿಸ್ ಮಾಡದೇ ಓದಿ : rrb group d answer key : ರೈಲ್ವೆ RRB ಗ್ರೂಪ್ D ಪರೀಕ್ಷೆ 2026 ಉತ್ತರ ಪ್ರಕಟ
ಇದನ್ನು ಮಿಸ್ ಮಾಡದೇ ಓದಿ : ಅಗ್ನಿವೀರ್ ನೇಮಕಾತಿಗಾಗಿ ಅನ್‌ಲೈನ್ ಅರ್ಜಿ ಅಹ್ವಾನ
ಬಿಡದಿ, ಕನಕಪುರ, ಹಾರೋಹಳ್ಳಿ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕೆಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ, ಜಿಲ್ಲೆಯ ಕನಿಷ್ಠ 5 ಸಾವಿರ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಕಂಪನಿಗಳಾದ ಟಯೋಟ ಕಿರ್ಲೋಸ್ಕರ್, ಬಾಶ್, ಆಂಥಮ್, ಟಿಐಎ ಸೇರಿದಂತೆ ಜಿಲ್ಲೆಯ ಸುತ್ತ ಮುತ್ತಲಿನ ಕಂಪನಿಗಳು ಸೇರಿದಂತೆ ಸುಮಾರು 250 ಸಂಸ್ಥೆಗಳನ್ನು ಉದ್ಯೋಗ ಮೇಳಕ್ಕೆ ಆಹ್ವಾನಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಂಬಂಧಿಸಿದವರಿಗೆ ಅವರು ಸೂಚಿಸಿದರು.

ಕೈಗಾರಿಕೆಗಳು ತಮ್ಮ ಸಂಸ್ಥೆಗಳಿಗೆ ಅವಶ್ಯವಿರುವ ಮಾನವ ಸಂಪನ್ಮೂಲದ ಮಾಹಿತಿಯನ್ನು ಜಿಲ್ಲಾ ಪಂಚಾಯತ್‌ಗೆ ಒದಗಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಿ ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರಿಗೆ ಅರ್ಹತೆಗೆ ಅನುಗುಣವಾಗಿ ಉದ್ಯೋಗಾವಕಾಶವನ್ನು ಕಲ್ಪಸುವಂತೆ ಸಭೆಯಲ್ಲಿ ಭಾಗವಹಿಸಿದ್ದ ಕೈಗಾರಿಕೆಗಳ ಮುಖ್ಯಸ್ಥರಿಗೆ ತಿಳಿಸಿದರು.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಇಂಜಿನಿಯರಿಂಗ್ ಸೇರಿದಂತೆ ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣ ಹೊಂದಿರುವ ಜಿಲ್ಲೆಯ ಉದ್ಯೋಗಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅನುವು ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಉದ್ಯೋಗ ಮೇಳದ ಮಾಹಿತಿ ಒದಗಿಸಲು ಸಹಾಯವಾಣಿ ತೆರೆಯಬೇಕು. ಭಿತ್ತಿಪತ್ರ, ಕರಪತ್ರಗಳ ಮೂಲಕ, ಆಟೋ ಧ್ವನಿವರ್ಧಕ ಪ್ರಚಾರ, ಸಾಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಆನ್‌ಲೈನ್‌ನಲ್ಲಿ ಮೂಲಕ https://docs.google.com/forms/d/e/1AAlpQLSc07MZrMxk3jOe8ggmCSRAJe2b67VljqDe3L05tB8l10Sl4Gg/viewform ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೆ. ರಾಜು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾದ ಎಸ್. ಗಂಗಾಧರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಿ.ಎನ್. ನಟರಾಜು ಗಾಣಕಲ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚೇತನ್ ಕುಮಾರ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೆಶಕರಾದ ಶಿವಕುಮಾರ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೈಗಾರಿಕಾ ಸಂಸ್ಥೆಗಳ ಮುಖ್ಯಸ್ಥರುಗಳು ಹಾಗೂ ಇತರರು ಉಪಸ್ಥಿತರಿದ್ದರು.
ಇಂದು ಬಿಡದಿ ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ : ಬಿಡದಿ ಪುರಸಭೆ ಕಾರ್ಯಾಲಯ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಫೆ. 18ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಬಿಡದಿಯ ಬಿ.ಜಿ.ಎಸ್ ವೃತ್ತದಲ್ಲಿ ಬಿಡದಿ ಪುರಸಭೆ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ರಾಜ್ಯದ ಉಪಮುಖ್ಯಮಂತ್ರಿಗಳು, ಭಾರಿ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರ ಅಭಿವೃದ್ಧಿ ಹಾಗೂ ಬೆಂಗಳೂರು ನಗರ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಘನ ಉಪಸ್ಥಿತಿಯಲ್ಲಿ ಸಾರಿಗೆ, ಮುಜರಾಯಿ ಇಲಾಖೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಸಿ. ಬಾಲಕೃಷ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಪೌರಾಡಳಿತ ಮತ್ತು ಹಜ್ ಇಲಾಖೆ ಸಚಿವರಾದ ರಹೀಂ ಖಾನ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಸಿ.ಎನ್. ಮಂಜುನಾಥ್, ವಿಧಾನ ಪರಿಷತ್ ಶಾಸಕರಾದ ಪುಟ್ಟಣ್ಣ, ಎಸ್. ರವಿ, ಸುಧಾಮ್ ದಾಸ್, ರಾಮೋಜಿ ಗೌಡ, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾದ ಎಸ್. ಗಂಗಾಧರ್, ಬೆಂಗಳೂರು ದಕ್ಷಿಣ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ರಾಜು, ಬಿ.ಎಂ.ಐ.ಸಿ.ಪಿ.ಎ ಅಧ್ಯಕ್ಷರಾದ ರಘುನಂದನ್ ರಾಮಣ್ಣ, ಬಿಡದಿ ಪುರಸಭೆ ಅಧ್ಯಕ್ಷರಾದ ಭಾನುಪ್ರಿಯಾ ಎಚ್.ಆರ್., ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಿ.ಎನ್. ನಟರಾಜು ಗಾಣಕಲ್, ರಾಮನಗರ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಎಚ್. ರಾಜು, ಬಿಡದಿ ಪುರಸಭೆ ಉಪಾಧ್ಯಕ್ಷರಾದ ಆಯಿಷಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ದೇವರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
Job fair to be held in Bengaluru South district on March 5