ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಕನ್ನಡಕ್ಕೆ ಕೊಕ್, ಉರ್ದುವಿಗೆ ಮಣೆ! ಸಚಿವ ದಿನೇಶ್ ಗುಂಡೂರಾವ್ ‘ಉಡಾಫೆ’ ಉತ್ತರದ ವಿರುದ್ಧ ಭಾರಿ ಆಕ್ರೋಶ

Karnataka-Government-Urdu-Invitation-Controversy-2026

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಭಾರಿ ವಿವಾದಕ್ಕೆ ಸಿಲುಕಿದೆ. ಅಧಿಕೃತ ಆಡಳಿತ ಭಾಷೆ ಕನ್ನಡವನ್ನು ನಿರ್ಲಕ್ಷಿಸಿ, ಆರೋಗ್ಯ ಇಲಾಖೆಯ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ ಪ್ರಕಟಿಸಿರುವುದು ಈಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಸಚಿವ ದಿನೇಶ್ ಗುಂಡೂರಾವ್ ನೀಡಿರುವ ಉತ್ತರ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಏನಿದು ಉರ್ದು ಆಹ್ವಾನ ಪತ್ರಿಕೆ ವಿವಾದ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನೆಹರೂ ತಾರಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿಮೋಫಿಲಿಯಾ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ ಮುದ್ರಿಸಲಾಗಿದೆ. ರಾಜ್ಯದ ಅಧಿಕೃತ ಭಾಷೆ ಕನ್ನಡವಿದ್ದರೂ, ಕೇವಲ ಒಂದು ಸಮುದಾಯದ ಓಲೈಕೆಗಾಗಿ ಸರ್ಕಾರ ಈ ರೀತಿ ಮಾಡಿದೆ ಎಂಬ ಆರೋಪ ಕೇಳಿಬರುತ್ತಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಸಚಿವ ದಿನೇಶ್ ಗುಂಡೂರಾವ್ ಅವರ ‘ಉಡಾಫೆ’ ಪ್ರತಿಕ್ರಿಯೆ : ಈ ವಿವಾದದ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿದ ಉತ್ತರ ಉರ್ದುವಿನಲ್ಲಿ ಆಹ್ವಾನ ಪತ್ರಿಕೆ ಮುದ್ರಿಸಿದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಉರ್ದು ಭಾಷೆ ಮಾತನಾಡುವವರು ಕರ್ನಾಟಕದಲ್ಲಿ ಇಲ್ಲವೇ ಎಂದು ಉಡಾಫೆಯಿಂದ ಪ್ರಶ್ನಿಸಿದ್ದಾರೆ. ಜನಸಾಮಾನ್ಯರ ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸುವ ಬದಲು, ಒಂದು ನಿರ್ದಿಷ್ಟ ವರ್ಗವನ್ನು ಓಲೈಸಲು ಸರ್ಕಾರ ಬಳಸುತ್ತಿದೆ. ಆಂಬುಲೆನ್ಸ್ ಲೋಕಾರ್ಪಣೆಯಂತಹ ಸಾರ್ವಜನಿಕ ಕಾರ್ಯಕ್ರಮದಲ್ಲೂ ಭಾಷಾ ರಾಜಕಾರಣ ಮಾಡುತ್ತಿರುವುದು ಖಂಡನೀಯ” ಎಂದು ವಿರೋಧ ಪಕ್ಷದ ನಾಯಕರು ಗುಡುಗಿದ್ದಾರೆ.

RECENT NEWS